ಸಹಕಾರ ಮಹಾಮಂಡಲದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ| ಶಶಿಕುಮಾರ್ ಬಾಲ್ಯೊಟ್ಟು ಭರ್ಜರಿ ಗೆಲುವು

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ಆಡಳಿತ ಮಂಡಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಎಲ್ಲ 18 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

. Ad Widget . Ad Widget . Ad Widget .

ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಬೆಂಬಲದಿಂದ ಮೈಸೂರು ವಿಭಾಗದಲ್ಲಿದ್ದ 18ಕ್ಕೆ 18 ಮತಗಳು ಶಶಿಕುಮಾರ್ ರೈ ಅವರಿಗೆ ದೊರೆತಿದೆ. ಈ ಮೂಲಕ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ 62 ವರ್ಷಗಳ ಇತಿಹಾಸದಲ್ಲಿ ನಿರ್ದೇಶಕರಾಗಿ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಸಹಕಾರ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾಗಿ, ಪುತ್ತೂರು ತಾಲ್ಲೂಕಿನ ಇರ್ದೆ-ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Leave a Comment

Your email address will not be published. Required fields are marked *