ಸಚಿವ ನಾಗೇಂದ್ರ ರಾಜೀನಾಮೆ| ಬಿಜೆಪಿ ಪಾಲಿಗೆ ಮೊದಲ ಯಶ

ಸಮಗ್ರ ನ್ಯೂಸ್: ಕಳೆದ ಹಲವು ದಿನಗಳಿಂದ ರಾಜ್ಯ ಸರ್ಕಾರ ಹಾಗೂ ಬಿಜೆಪಿ ನಡುವಿನ ಯುದ್ಧಕ್ಕೆ ಕಾರಣವಾಗಿದ್ದ ವಾಲ್ಮೀಕಿ ಹಗರಣ ಹಾಗೂ ಸಚಿವ ಬಿ ನಾಗೇಂದ್ರ ರಾಜೀನಾಮೆ ಪ್ರಕರಣದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಹೋರಾಟಕ್ಕೆ ಕಾಂಗ್ರೆಸ್ ಸರ್ಕಾರ ಮಣಿದಿದೆ.

. Ad Widget . Ad Widget

ಪರಿಣಾಮ ಬಿ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜೀನಾಮೆ ಅಂಗೀಕರಿಸಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ.

. Ad Widget . . Ad Widget . Ad Widget

ಬಿವೈ ವಿಜಯೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರು ಡಿಕೆ ಶಿವಕುಮಾರ್ ಸರ್ಕಾರದ ವಿರುದ್ದ ಸತತ ಹೋರಾಟದ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಡಿಕೆ ಶಿವಕುಮಾರ್ ಸಚಿವ ಸಂಪುಟ ವಿಸ್ತರಣೆ ವೇಳೆ ಬಿ ನಾಗೇಂದ್ರ ಸೇರ್ಪಡೆ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿತ್ತು. 187 ಕೋಟಿ ರೂಪಾಯಿ ಮೊತ್ತದ ವಾಲ್ಮೀಕಿ ಹಗರಣ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೆ ಮಳುವಾಯಿತು. ಪ್ರತಿಭಟನೆ, ಹೋರಾಟ ತೀವ್ರಗೊಳಿಸಿದ್ದ ಬಿವೈ ವಿಜಯೇಂದ್ರ, ಬಳ್ಳಾರಿ ಪಾದಯಾತ್ರೆ ಘೋಷಿಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಪರಿಣಾಮ ಬಿ ನಾಗೇಂದ್ರ ರಾಜೀನಾಮೆ ಪಡೆದುಕೊಂಡಿರುವ ಕಾಂಗ್ರೆಸ್, ಪರಿಸ್ಥಿತಿ ನಿಭಾಯಿಸುವ ತಂತ್ರ ಮಾಡಿದೆ. ಆದರೆ ಈ ಹೋರಾಟ ರಾಜೀನಾಮೆಯಿಂದ ಅಂತ್ಯಗೊಳ್ಳುತ್ತಿಲ್ಲ ಅನ್ನೋ ಸ್ಪಷ್ಟ ಸಂದೇಶವನ್ನು ಬಿವೈ ವಿಜಯೇಂದ್ರ ನೀಡಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲೂ ನಾಗೇಂದ್ರ ವಜಾಗೆ ಬಿಜೆಪಿ ಒತ್ತಾಯಿಸಿತ್ತು. ಸದನದ ಒಳಗೂ, ಹೊರಗೂ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಇದರ ಪರಿಣಾಮ ಸರ್ಕಾರ ಅಧಿವೇಶವನ್ನೇ ಮೊಟಕುಗೊಳಿಸಿತ್ತು. ಇದರ ಬೆನ್ನಲ್ಲೇ ನಾಗೇಂದ್ರ ವಜಾಗೆ ಪಟ್ಟು ಹಿಡಿದು ವಿಜಯೇಂದ್ರ ಪಾದಯಾತ್ರೆ ಘೋಷಿಸಿದ್ದರು. ರಾಯಚೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಘೋಷಣೆ ಮಾಡಿದ್ದರು. ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಸರ್ಕಾರ ಮಣಿದು ನಾಗೇಂದ್ರ ರಾಜೀನಾಮೆ ಪಡೆದುಕೊಂಡಿದೆ.

ವಾಲ್ಮೀಕಿ ಸಮುದಾಯದ ಅಭಿೃದ್ಧಿಗೆ ಮೀಸಲಿಟ್ಟ ಹಣ ಭ್ರಷ್ಟರ ಕೈಸರಿದೆ. ನಾಗೇಂದ್ರ ರಾಜೀನಾಮೆಯಿಂದ ಹೋರಾಟ ಅಂತ್ಯಗೊಳ್ಳುತ್ತಿಲ್ಲ. 187 ಕೋಟಿ ರೂಪಾಯಿ ವಾಪಸ್ ಖಾತೆಗೆ ಬರುವವರೆಗೂ ಹೋರಾಟ ಮುಂದುವರಿಯಲಿದೆ. ಪಾದಯಾತ್ರೆ ನಡೆಯಲಿದೆ ಎಂದು ಬಿವೈ ವಿಜಯೇಂದ್ರ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದಾರೆ.

Leave a Comment

Your email address will not be published. Required fields are marked *