August 2026

ಭಾರೀ ಮಳೆ ಹಿನ್ನೆಲೆ| ಆ.08 ರಂದು ಪುತ್ತೂರು ವಿಭಾಗದ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶನಿವಾರ (ಆ.08) ರಂದು ಜಿಲ್ಲೆಯ ಪುತ್ತೂರು ವಿಭಾಗದ ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ (PU) ಕಾಲೇಜುಗಳಿಗೆ

ಭಾರೀ ಮಳೆ ಹಿನ್ನೆಲೆ| ಆ.08 ರಂದು ಪುತ್ತೂರು ವಿಭಾಗದ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತೊಬ್ಬ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದ ಉಮರ್ ಫಾರೂಕ್‌ನನ್ನು ಬಂಧಿಸಿದೆ. ಹಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಎನ್‌ಐಎ ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಗೆ ಮಹತ್ವದ ಯಶಸ್ಸು ದೊರೆತಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದು, ಎನ್‌ಐಎ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಉಮರ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತೊಬ್ಬ ಆರೋಪಿ ಅರೆಸ್ಟ್ Read More »

ಮೂಡಬಿದ್ರೆ: ಆ.7ರಂದು ಆಳ್ವಾಸ್ ನಲ್ಲಿ ದೇಶದ ಅತೀದೊಡ್ಡ ಉದ್ಯೊಗ ಮೇಳ

ಸಮಗ್ರ ನ್ಯೂಸ್: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7ರಂದು ಬೆಳಿಗ್ಗೆ 9.30ಕ್ಕೆ ವಿದ್ಯಾಗಿರಿಯ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್‌ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಂಸದ ಸದಸ್ಯ ಬ್ರಿಜೇಶ್ ಚೌಟ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ

ಮೂಡಬಿದ್ರೆ: ಆ.7ರಂದು ಆಳ್ವಾಸ್ ನಲ್ಲಿ ದೇಶದ ಅತೀದೊಡ್ಡ ಉದ್ಯೊಗ ಮೇಳ Read More »

ಮಂಗಳೂರು: ಕಿರಿಯ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್| ಐವರ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಪಾಂಡೇಶ್ವರದ ಖಾಸಗಿ ಮೆಡಿಕಲ್ ಕಾಲೇಜಿನ ಇಬ್ಬರು ಕಿರಿಯ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್ ನಡೆಸಿದ ಆರೋಪದ ಮೇರಿಗೆ ಐವರು ಹಿರಿಯ ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಿಸಲಾಗಿದೆ. ಖಾಸಗಿ ಮೆಡಿಕಲ್ ಕಾಲೇಜಿನ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳು ಕಪ್ಪು ಬಣ್ಣದ ಶೂ ಧರಿಸಿದ್ದರು ಎನ್ನುವ ಕಾರಣಕ್ಕೆ ಹಿರಿಯ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿದೆ. ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದು, ದೂರು ನೀಡಿದ್ದಾರೆ. ಗುಜ್ಜರಕೆರೆ ಪ್ರದೇಶದಲ್ಲಿ ಘಟನೆ ನಡೆದಿದೆ.

ಮಂಗಳೂರು: ಕಿರಿಯ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್| ಐವರ ವಿರುದ್ಧ ಪ್ರಕರಣ ದಾಖಲು Read More »

ಮುಂದುವರಿದ ವರ್ಷಧಾರೆ| ಏಳು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರು

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 5ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ

ಮುಂದುವರಿದ ವರ್ಷಧಾರೆ| ಏಳು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರು Read More »

ರಿಯಾಜ್ ಫರಂಗಿಪೇಟೆಗೆ ‘ತಾಂಟಿದ’ ಕೋರ್ಟ್| ಪ್ರಚೋದನಕಾರಿ ಭಾಷಣಕ್ಕೆ 6 ತಿಂಗಳು ಜೈಲು ಮತ್ತು ದಂಡ

ಸಮಗ್ರ ನ್ಯೂಸ್: ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತನಿಗೆ ಮಾನ್ಯ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ದಿನಾಂಕ 23-07-2015 ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ ‘ಪಾಪುಲರ್ ಫ್ರಂಟ್ ಆಫ್ ಇಂಡಿಯಾ’ (PFI) ಬೆಳ್ತಂಗಡಿ ವಲಯ ಸಂಘಟನೆಯ ವತಿಯಿಂದ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತ

ರಿಯಾಜ್ ಫರಂಗಿಪೇಟೆಗೆ ‘ತಾಂಟಿದ’ ಕೋರ್ಟ್| ಪ್ರಚೋದನಕಾರಿ ಭಾಷಣಕ್ಕೆ 6 ತಿಂಗಳು ಜೈಲು ಮತ್ತು ದಂಡ Read More »

ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ ಮತ್ತೊಂದು ಹೊಚ್ಚ ಹೊಸ‌ ಯೋಜನೆ ಆರಂಭ| ‘ಋತುಧಾರೆ’ಗೆ ರಮ್ಯಾ ರಾಯಭಾರಿ

ಸಮಗ್ರ ನ್ಯೂಸ್: ಮಹಿಳೆಯರಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿ ಮಾಡಿದೆ. ಪ್ರಮುಖವಾಗಿ ಮಹಿಳೆಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಆರೋಗ್ಯ ಇಲಾಖೆಯಿಂದ ‘ಋತುತಾರೆ’ ಎಂದು ಮಹತ್ವದ ಯೋಜನೆ ಜಾರಿಯಾಗಿದೆ. ವಿಧಾನಸೌಧದಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್, ನಟಿ ರಮ್ಯಾ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದರು. ಮಹಿಳೆಯರಿಗಾಗಿ ಋತುತಾರೆ ಎಂಬ ಹೊಸ ಯೋಜನೆ ಜಾರಿಗೊಳಿಸುತ್ತಿದ್ದೇವೆ. ಮಹಿಳಾ ತಜ್ಞೆ ಜೋಸ್ನಾ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ಯು.ಟಿ.ಖಾದರ್

ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ ಮತ್ತೊಂದು ಹೊಚ್ಚ ಹೊಸ‌ ಯೋಜನೆ ಆರಂಭ| ‘ಋತುಧಾರೆ’ಗೆ ರಮ್ಯಾ ರಾಯಭಾರಿ Read More »

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಧ್ಯವರ್ತಿಗಳಿಂದ ಪೂಜೆ ಮಾಡಿಸ್ತೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು…

ಸಮಗ್ರ ನ್ಯೂಸ್: ಕರ್ನಾಟಕದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ಮಂಡಳಿಯು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದೆ. ಇನ್ಮುಂದೆ ದೇವಾಲಯದಲ್ಲಿ ಮಧ್ಯವರ್ತಿಗಳ ಮೂಲಕ ತೆಗೆದುಕೊಳ್ಳುವ ಸೇವೆ ಮಾನ್ಯ ಮಾಡುವುದಿಲ್ಲ ಎಂದು ಹೇಳಲಾಗಿದೆ. ಅಲ್ಲದೆ ಕುಕ್ಕೆ ದೇವಾಲಯದಲ್ಲಿ ಸೇವೆ ನೆರವೇರಿಸಿದರೆ ಮಾತ್ರ ಪೂರ್ಣಫಲ ಸಿಗಲಿದೆ. ಮಧ್ಯವರ್ತಿಗಳ ಮೂಲಕ ಖಾಸಗಿ ಸ್ಥಳಗಳಲ್ಲಿ ಪೂಜೆ ಮಾಡಿದರೆ ಪೂರ್ಣ ಫಲ ಸಿಗುವುದಿಲ್ಲ; ಅಲ್ಲದೆ ದೋಷವೂ ಸಹ ಪರಿಹಾರವಾಗುವುದಿಲ್ಲ ಎಂದು ಹೇಳಲಾಗಿದೆ. ಇದರ ಸಂಪೂರ್ಣ ವಿವರ ಈ ಲೇಖನದಲ್ಲಿದೆ. ಕರ್ನಾಟಕದ ಪ್ರಸಿದ್ಧ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಧ್ಯವರ್ತಿಗಳಿಂದ ಪೂಜೆ ಮಾಡಿಸ್ತೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು… Read More »

ರಾಜೀನಾಮೆ ನೀಡಿದರೆ ಅಂಗೀಕರಿಸಿ| ರೆಬಲ್ ಶಾಸಕರಿಗೆ ಶಾಕ್ ಕೊಟ್ಟ ಕೈ ಹೈಕಮಾಂಡ್

ಸಮಗ್ರ ನ್ಯೂಸ್: ಸಿಎಂ ಡಿಕೆ ಶಿವಕುಮಾರ್​​ ಸಚಿವ ಸಂಪುಟ ವಿಸ್ತರಣೆ ಸಂಬಂಧ 20 ಜನರ ಹೆಸರನ್ನು ಒಳಗೊಂಡ ಪಟ್ಟಿ ಹೈಕಮಾಂಡ್​​ನಿಂದ ಬಿಡುಗಡೆ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಕೆಲ ಶಾಸಕರು ರಾಜೀನಾಮೆ ನೀಡೋದಾಗಿ ಅದಾಗಲೇ ಘೋಷಣೆ ಮಾಡಿದ್ದಾರೆ. ರಾಜೀನಾಮೆ ಬೆದರಿಕೆ ಹಾಕಿರುವ ಶಾಸಕರ ಕುರಿತು ವರಿಷ್ಠರು ವಿವರಣೆ ಕೇಳಿದ್ದು, ಸಚಿವ ಸ್ಥಾನ ಸಿಗದಿದ್ದವರಿಗೆ ನಿಗಮ ಮಂಡಳಿ ಕೊಡುತ್ತೇವೆ. ಅದನ್ನೂ ಮೀರಿ ರಾಜೀನಾಮೆ ನೀಡಿದರೆ ಅಂಗೀಕರಿಸಿ ಎಂದು ಸಿಎಂ ಡಿಕೆಶಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ

ರಾಜೀನಾಮೆ ನೀಡಿದರೆ ಅಂಗೀಕರಿಸಿ| ರೆಬಲ್ ಶಾಸಕರಿಗೆ ಶಾಕ್ ಕೊಟ್ಟ ಕೈ ಹೈಕಮಾಂಡ್ Read More »

ಬಿಜೆಪಿ ‌ಭದ್ರಕೋಟೆಗೆ ಲಗ್ಗೆ ಇಟ್ಟ ಪ್ರಶಾಂತ್ ಕಿಶೋರ್| ಬಂಕಿಪುರ ಉಪಚುನಾವಣೆಯಲ್ಲೆ ಭರ್ಜರಿ ಜಯ

ಸಮಗ್ರ ನ್ಯೂಸ್: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಭರ್ಜರಿ ಜಯ ದಾಖಲಿಸಿದ್ದಾರೆ.‌ ಈ ಗೆಲುವಿನ ಮೂಲಕ ಬಿಹಾರದ ಸಾಂಪ್ರದಾಯಿಕ ರಾಜಕೀಯ ಪಕ್ಷಗಳಾದ ಬಿಜೆಪಿ ಮತ್ತು ಆರ್‌ಜೆಡಿಗೆ ಕಿಶೋರ್ ಪ್ರಬಲ ಎಚ್ಚರಿಕೆ ನೀಡಿದ್ದಾರೆ. ಬಂಕಿಪುರ ಕ್ಷೇತ್ರದಲ್ಲಿ ನಡೆದ ಕಠಿಣ ಪೈಪೋಟಿಯಲ್ಲಿ ಪ್ರಶಾಂತ್ ಕಿಶೋರ್ ಅವರು ಬಿಜೆಪಿಯ ನೀರಜ್ ಕುಮಾರ್ ಅವರನ್ನು

ಬಿಜೆಪಿ ‌ಭದ್ರಕೋಟೆಗೆ ಲಗ್ಗೆ ಇಟ್ಟ ಪ್ರಶಾಂತ್ ಕಿಶೋರ್| ಬಂಕಿಪುರ ಉಪಚುನಾವಣೆಯಲ್ಲೆ ಭರ್ಜರಿ ಜಯ Read More »