ಸುಳ್ಯ: ಕಾಡಾನೆ ಓಡಿಸುವ ಕಾರ್ಯಾಚರಣೆ ವೇಳೆ ಎಡವಟ್ಟು| ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡಿನಿಂದ ಇಬ್ಬರು ಅಪಾಯಕ್ಕೆ!!
ಸಮಗ್ರ ನ್ಯೂಸ್: ಚಾಮರಾಜನಗರದ ಹನೂರು ಎನ್‌ಕೌಂಟರ್ ಪ್ರಕರಣದ ತನಿಖೆ ನಡೆಯುತ್ತಿರುವ ನಡುವೆಯೇ ಅರಣ್ಯ ಇಲಾಖೆಯ ಮತ್ತೊಂದು ನಿರ್ಲಕ್ಷ್ಯದ ಘಟನೆ ದಕ್ಷಿಣ ಕನ್ನಡದಲ್ಲಿ ಬೆಳಕಿಗೆ ಬಂದಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಬೆಂಗಮಲೆಯಲ್ಲಿ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡಿನಿಂದ ಇಬ್ಬರು ಬೈಕ್ ಸವಾರರು ಅಪಾಯಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ನಡೆದ ಘಟನೆಯಲ್ಲಿ ರಾಘವ ಪ್ರಭು ಎಂಬುವರ ಕಾಲಿಗೆ ಗುಂಡು ತಗುಲಿ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. […]










