August 2026

ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ|ಉದ್ಯೋಗದ ಜೊತೆಗೆ ಸ್ವಂತ ವ್ಯವಹಾರ ಆರಂಭಿಸಲು ಸುವರ್ಣಾವಕಾಶ|ಇಲ್ಲಿದೆ ಹೆಚ್ಚಿನ ಮಾಹಿತಿ

ಸಮಗ್ರ ನ್ಯೂಸ್: ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಅನುಭವ ಇರುವವರಿಗೆ, ಪದವೀಧರರಿಗೆ ಹಾಗೂ ಉದ್ಯೋಗ ಆಕಾಂಕ್ಷಿಗಳಿಗೆ ವಿಶೇಷ ಅವಕಾಶ! ನಿಮ್ಮ ಸಮಯಕ್ಕೆ ತಕ್ಕಂತೆ ಕೆಲಸ ಮಾಡಿ, ಆದಾಯ ಗಳಿಸಿ, ಜೊತೆಗೆ ನಿಮ್ಮ ನಾಯಕತ್ವ ಮತ್ತು ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ. ✅ Work From Home ✅ Part Time / Full Time ✅ ಶಿಕ್ಷಣ ಕ್ಷೇತ್ರದಲ್ಲಿ ಗೌರವಯುತ ಅವಕಾಶ ✅ ದಿನಕ್ಕೆ ಕೇವಲ 1 ಗಂಟೆ ಸಾಕು ✅ ಹೆಚ್ಚುವರಿ ಆದಾಯದೊಂದಿಗೆ ವ್ಯಕ್ತಿತ್ವ ವಿಕಸನ ✅ ಅನುಭವಿ

ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ|ಉದ್ಯೋಗದ ಜೊತೆಗೆ ಸ್ವಂತ ವ್ಯವಹಾರ ಆರಂಭಿಸಲು ಸುವರ್ಣಾವಕಾಶ|ಇಲ್ಲಿದೆ ಹೆಚ್ಚಿನ ಮಾಹಿತಿ Read More »

ಮಂಗಳೂರು: ಈದ್ ಮಿಲಾದ್ ರಜೆ ಬದಲಾವಣೆಗೆ ಮನವಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದ್ ಮಿಲಾದ್‌ ಪ್ರಯುಕ್ತ ನೀಡುವ ಸರ್ಕಾರಿ ರಜೆಯನ್ನು ಆ.25ಕ್ಕೆ ಘೋಷಿಸುವಂತೆ ವಿನಂತಿಸಿ, ಮುಸ್ಲಿಂ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸರ್ಕಾರಿ ರಜೆಯು ಆ.26ಕ್ಕೆ ನಿಗದಿಯಾಗಿದೆ. ಆದರೆ, ಇಸ್ಲಾಮಿಕ್ ತಿಂಗಳ ಆರಂಭದ ಚಂದ್ರ ದರ್ಶನದಲ್ಲಿ ವ್ಯತ್ಯಾಸದ ಕಾರಣ ಆ. 25ರಂದು ‘ಮೀಲಾದ್’ ನಡೆಸಲು ಜಿಲ್ಲೆಯ ಎಲ್ಲ ಮಸೀದಿಗಳ ಖಾಝಿಗಳು ನಿರ್ಧರಿಸಿದ್ದಾರೆ. ಮೀಲಾದ್ ದಿನದಂದು ಜಿಲ್ಲೆಯ ಎಲ್ಲ ಮಸೀದಿ ವ್ಯಾಪ್ತಿಯಲ್ಲಿ ಮೆರವಣಿಗೆ, ಸಾಂಸ್ಕೃತಿಕ

ಮಂಗಳೂರು: ಈದ್ ಮಿಲಾದ್ ರಜೆ ಬದಲಾವಣೆಗೆ ಮನವಿ Read More »

ಪ್ರಾಂಶುಪಾಲರನ್ನೇ 27 ಬಾರಿ ಇರಿದು ಹತ್ಯೆ ಮಾಡಿದ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ಕೇವಲ ಐಷಾರಾಮಿ ಜೀವನದ ಹಪಾಹಪಿಗೆ ಬಿದ್ದ ಇಬ್ಬರು 10ನೇ ತರಗತಿಯ ವಿದ್ಯಾರ್ಥಿಗಳು, ತಮ್ಮದೇ ಶಾಲೆಯ ಪ್ರಾಂಶುಪಾಲರನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದೆ. ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿಯ ಶಾಲೆಯೊಂದರ ಪ್ರಾಂಶುಪಾಲರಾದ ಕಲ್ಲು ರೂಪಾ ರೆಡ್ಡಿ ಎಂಬುವವರು ಆಗಸ್ಟ್ 11ರಂದು ತಮ್ಮ ಮನೆಯಲ್ಲಿಯೇ ಭೀಕರವಾಗಿ ಕೊಲೆಯಾಗಿದ್ದರು. ಈ ಕೊಲೆ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ದಿಗಿಲು ಹುಟ್ಟಿಸುವ ಸತ್ಯಾಂಶಗಳು ಲಭ್ಯವಾಗಿವೆ. ಈ ಕೊಲೆ ಮಾಡಿದ್ದು ಬೇರಾರೂ ಅಲ್ಲ, ಅದೇ ಶಾಲೆಯ 10ನೇ

ಪ್ರಾಂಶುಪಾಲರನ್ನೇ 27 ಬಾರಿ ಇರಿದು ಹತ್ಯೆ ಮಾಡಿದ ವಿದ್ಯಾರ್ಥಿಗಳು Read More »

ಬಂಟ್ವಾಳ: ಸಿನಿಮೀಯ ಶೈಲಿಯಲ್ಲಿ 8.35 ಲಕ್ಷ ರೂ ದರೋಡೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡದಲ್ಲಿ ಹಾಡಹಗಲೇ ಬೈಕ್ ಸವಾರರೋರ್ವರನ್ನು ಅಡ್ಡಗಟ್ಟಿದ ಎರಡು ಬೈಕ್‌ನಲ್ಲಿ ಬಂದ ನಾಲ್ವರು ಅಪರಿಚಿತರು, ತಲವಾರು ತೋರಿಸಿ 8.35 ಲಕ್ಷ ರೂ. ನಗದು ಹಣವನ್ನು ಸುಲಿಗೆಗೈದು ಪರಾರಿಯಾದ ಘಟನೆ ಗುರುವಾರ ನಡೆದಿದ್ದು, ಸ್ಥಳೀಯವಾಗಿ ಅತಂಕವನ್ನುಂಟು ಮಾಡಿದೆ. ಮಂಗಳೂರಿನ ಕಣ್ಣೂರು ಎಂಬಲ್ಲಿ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಹೋಲ್ ಸೇಲ್ ಸಂಸ್ಥೆಯೊಂದರ ಉದ್ಯೋಗಿ, ಸುರತ್ಕಲ್‌ನ ಚೊಕ್ಕಬೆಟ್ಟು ನಿವಾಸಿ, ಕಳೆದ 27ವರ್ಷಗಳಿಂದ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಯ್ಯದಿ (61)

ಬಂಟ್ವಾಳ: ಸಿನಿಮೀಯ ಶೈಲಿಯಲ್ಲಿ 8.35 ಲಕ್ಷ ರೂ ದರೋಡೆ Read More »

ವರ್ಷಾಂತ್ಯದೊಳಗೆ ಜಿ.ಪಂ, ತಾ.ಪಂ, ಗ್ರಾ.ಪಂ ಗಳಿಗೆ ಚುನಾವಣೆ – ಯತೀಂದ್ರ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳ ಜೊತೆಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೂ ಈ ವರ್ಷದ ಅಂತ್ಯದೊಳಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ನಿಯಮ 72ರ ಅಡಿಯಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರು ಪ್ರಸ್ತಾಪಿಸಿದ ಗಮನಸೆಳೆಯುವ ಸೂಚನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಪರವಾಗಿ ಉತ್ತರಿಸಿದ ಯತೀಂದ್ರ ಸಿದ್ದರಾಮಯ್ಯ, ಪಂಚಾಯಿತಿ ಚುನಾವಣೆಗಳ ಕುರಿತು ಸರ್ಕಾರದ ಸಿದ್ಧತೆಗಳನ್ನು ವಿವರಿಸಿದರು. ತಾಲೂಕು ಹಾಗೂ ಜಿಲ್ಲಾ

ವರ್ಷಾಂತ್ಯದೊಳಗೆ ಜಿ.ಪಂ, ತಾ.ಪಂ, ಗ್ರಾ.ಪಂ ಗಳಿಗೆ ಚುನಾವಣೆ – ಯತೀಂದ್ರ ಸಿದ್ದರಾಮಯ್ಯ Read More »

ವಿಟ್ಲ: ಬಸ್ಸಿನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ|ಆರೋಪಿಗೆ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿಟ್ಲ ಠಾಣೆ ಪೊಲೀಸರು ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ. ಆಗಸ್ಟ್ 15 ರಂದು ಸಂತ್ರಸ್ತ ಅಪ್ರಾಪ್ತ ಬಾಲಕನು ವಿಟ್ಲ ಠಾಣಾ ವ್ಯಾಪ್ತಿಯ ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಬರುತ್ತಿದ್ದಾಗ, ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸನ್ನೇರಿದ ಅಪರಿಚಿತ ವ್ಯಕ್ತಿ (ಉಮೇಶ್) ಬಾಲಕನ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ್ದ. ಬಳಿಕ ಬಾಲಕ ತನ್ನ ಮನೆಗೆ

ವಿಟ್ಲ: ಬಸ್ಸಿನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ|ಆರೋಪಿಗೆ ನ್ಯಾಯಾಂಗ ಬಂಧನ Read More »

ನಿರೂಪಣೆಗೆ ಗುಡ್ ಬೈ ಹೇಳಿದ ಅನುಪಮಾ ಗೌಡ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ನಿರೂಪಕಿ ಅನುಪಮಾ ಗೌಡ ಅವರು ತಮ್ಮ 8 ವರ್ಷಗಳ ನಿರೂಪಣೆಯ ಪಯಣಕ್ಕೆ ವಿದಾಯ ಹೇಳಿದ್ದಾರೆ. ಅನುಬಂಧ ಅವಾರ್ಡ್ಸ್‌, ಸೀರಿಯಲ್ ಸಂತೆ, ರಾಜ ರಾಣಿ, ಕ್ವಾಟ್ಲೆ ಕಿಚನ್, ನನ್ನಮ್ಮ ಸೂಪರ್ ಸ್ಟಾರ್ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿ ಕನ್ನಡಿಗರ ನೆಚ್ಚಿನ ನಿರೂಪಕಿಯಲ್ಲಿ ಒಬ್ಬರಾಗಿದ್ದರು. ‘ಅಕ್ಕ’ ಸೇರಿದಂತೆ ಹಲವು ಧಾರಾವಾಹಿಗಳಲ್ಲೂ ಅನುಪಮಾ ಕಾಣಿಸಿಕೊಂಡಿದ್ದಾರೆ. ಈಗ ನಿರೂಪಣೆಗೆ ವಿದಾಯ ಹೇಳುತ್ತಿರುವ ಬಗ್ಗೆ ಅನುಪಮಾ ಆನಂದಕುಮಾರ್ ಎನ್ನುವ ಯುಟ್ಯೂಬ್‌ ಚಾನೆಲ್‌ನಲ್ಲಿ, ಭಾವುಕ ಮಾತುಗಳನ್ನಾಡಿ ತಮ್ಮಿಷ್ಟದ ವೃತ್ತಿಗೆ

ನಿರೂಪಣೆಗೆ ಗುಡ್ ಬೈ ಹೇಳಿದ ಅನುಪಮಾ ಗೌಡ Read More »

ರಾಜ್ಯಾದ್ಯಂತ ಮುಂದುವರಿದ ಮಳೆ| ಹಲವು ಜಿಲ್ಲೆಗಳಲ್ಲಿ ಗಾಳಿ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಹಾಗೂ ರೈತರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಮುಂದಿನ ದಿನಗಳಲ್ಲೂ ಮುಂದುವರಿಯುವ ನಿರೀಕ್ಷೆಯಿದೆ. ಕಲಬುರಗಿ, ವಿಜಯಪುರ, ಬಾಗಲಕೋಟೆ, ಗದಗ,

ರಾಜ್ಯಾದ್ಯಂತ ಮುಂದುವರಿದ ಮಳೆ| ಹಲವು ಜಿಲ್ಲೆಗಳಲ್ಲಿ ಗಾಳಿ ಸಾಧ್ಯತೆ Read More »

ಕಾಸರಗೋಡು: ಇಬ್ಬರು ಅಪ್ರಾಪ್ತೆಯರನ್ನು ಲಾಡ್ಜ್ ಗೆ ಕರೆದೊಯ್ದ ಇಬ್ಬರು ಯುವಕರ ಬಂಧನ

ಸಮಗ್ರ ನ್ಯೂಸ್: ಸ್ನ್ಯಾಪ್‌ಚಾಟ್ ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡು, 14 ಹಾಗೂ 16 ವರ್ಷದ ಇಬ್ಬರು ಶಾಲಾ ಬಾಲಕಿಯರನ್ನು ಮಂಗಳೂರು ಸಮೀಪದ ಉಳ್ಳಾಲದ ಲಾಡ್ಜ್‌ಗೆ ಕರೆದೊಯ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಮೂಲದ ರಿಜ್ವಾನ್ (23) ಹಾಗೂ ಮುಹಮ್ಮದ್ ಸಾದ್ (19) ಬಂಧಿತ ಆರೋಪಿಗಳು. ಇವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ – POCSO) ಕಾಯ್ದೆಯ ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾಸರಗೋಡು: ಇಬ್ಬರು ಅಪ್ರಾಪ್ತೆಯರನ್ನು ಲಾಡ್ಜ್ ಗೆ ಕರೆದೊಯ್ದ ಇಬ್ಬರು ಯುವಕರ ಬಂಧನ Read More »

ಉಪ್ಪಿನಂಗಡಿ: ಯುವತಿಯರ ಮೇಲೆ‌ ಹಲ್ಲೆ ಆರೋಪ| 9 ಮಂದಿ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಕಾರನ್ನು ಅಕ್ರಮವಾಗಿ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಹಾಗೂ ಜೀವ ಬೆದರಿಕೆ ಒಡ್ಡಿದ ಘಟನೆಗೆ ಸಂಬಂಧಿಸಿದಂತೆ ಒಂಬತ್ತು ಮಂದಿ ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಠಾಣಾ ವ್ಯಾಪ್ತಿಯ ನಿವಾಸಿ ಫಾಯಿಝಾ (18) ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದೂರುದಾರರಾದ ಫಾಯಿಝಾ ಅವರು ಆಗಸ್ಟ್ 12ರ ರಾತ್ರಿ ಕೆಲಸ ಮುಗಿಸಿಕೊಂಡು ತಮ್ಮ ಪರಿಚಯದ ಸಿಪ್ನಾನ್‌, ಝಾಹಿರ್‌ ಹಾಗೂ ಸಫಿಯಾ ಅವರೊಂದಿಗೆ ಕಾರಿನಲ್ಲಿ ಮನೆಗೆ ಆಗಮಿಸಿದ್ದರು. ಫಾಯಿಝಾ

ಉಪ್ಪಿನಂಗಡಿ: ಯುವತಿಯರ ಮೇಲೆ‌ ಹಲ್ಲೆ ಆರೋಪ| 9 ಮಂದಿ ವಿರುದ್ಧ ದೂರು ದಾಖಲು Read More »