August 2026

ರಾಜ್ಯದಲ್ಲಿ ಪಾನ್ ಮಸಾಲಾ ಗುಟ್ಕಾ ನಿಷೇಧ ಆದೇಶ ಎರಡೇ ದಿನಕ್ಕೆ ರದ್ದು!

ಸಮಗ್ರ ನ್ಯೂಸ್: ಕೇವಲ ಎರಡು ದಿನಗಳ ಹಿಂದೆ ರಾಜ್ಯದಲ್ಲಿ ಜಾರಿಯಾದ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ಬ್ಯಾನ್ ಇದೀಗ ರದ್ದಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್ ಅವರು ಆದೇಶ ವಾಪಾಸ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ನಿಷೇಧ ಹೇರಲಾಗಿತ್ತು. ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ದಾಸ್ತಾನು,

ರಾಜ್ಯದಲ್ಲಿ ಪಾನ್ ಮಸಾಲಾ ಗುಟ್ಕಾ ನಿಷೇಧ ಆದೇಶ ಎರಡೇ ದಿನಕ್ಕೆ ರದ್ದು! Read More »

ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜೆ.ಎಸ್ ಪಾಟೀಲ್ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಯಲ್ಲಿ ಸ್ಪೀಕರ್ ಚುನಾವಣಾ ಪ್ರಕ್ರಿಯೆ ಅಧಿಕೃತವಾಗಿ ಆರಂಭಗೊಂಡಿದ್ದು, ನೂತನ ಸ್ಪೀಕರ್ ಆಗಿ ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿ.ಎಸ್. ಪಾಟೀಲ್ ಅವರ ಹೆಸರನ್ನು ಸ್ಪೀಕರ್ ಹುದ್ದೆಗೆ ಪ್ರಸ್ತಾಪಿಸಿದರೆ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಈ ಪ್ರಸ್ತಾಪಕ್ಕೆ ಪೂರ್ಣ ಬೆಂಬಲ ಸೂಚಿಸಿ ಅನುಮೋದನೆ ನೀಡಿದರು. ಈ ಪ್ರಮುಖ ರಾಜಕೀಯ ಹಂತದಲ್ಲಿ ವಿರೋಧ ಪಕ್ಷವಾದ ಭಾರತೀಯ ಜನತಾ ಪಾರ್ಟಿ

ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜೆ.ಎಸ್ ಪಾಟೀಲ್ ಅವಿರೋಧ ಆಯ್ಕೆ Read More »

ಮೀಸಲಾತಿ ಬಗ್ಗೆ ಅವಹೇಳನ ಆರೋಪ| ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ ಆರೋಪದಡಿ ಖಾಸಗಿ ವಾಹಿನಿಯ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ನಿರೂಪಕ ಅರುಣ್ ಬಡಿಗೇರ್ ಅವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ಕಾರ್ಯಕ್ರಮದಲ್ಲಿ ಮೀಸಲಾತಿ ಹಾಗೂ ಮೀಸಲಾತಿ ಫಲಾನುಭವಿಗಳ ಕುರಿತು ಅವಹೇಳನಕಾರಿ, ಪೂರ್ವಾಗ್ರಹಪೀಡಿತ ಮತ್ತು ಸಮಾಜದಲ್ಲಿ ದ್ವೇಷ, ವಿಭಜನೆ ಹಾಗೂ ತಪ್ಪು ಅಭಿಪ್ರಾಯಗಳನ್ನು ಉಂಟುಮಾಡುವ ಹೇಳಿಕೆಗಳನ್ನು ನೀಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ

ಮೀಸಲಾತಿ ಬಗ್ಗೆ ಅವಹೇಳನ ಆರೋಪ| ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಎಫ್ಐಆರ್ Read More »

ದಲಿತನೆಂಬ ಕಾರಣಕ್ಕೆ ಬಿಜೆಪಿಯಿಂದ ವೇದಿಕೆಯ ಶುದ್ದೀಕರಣ| ಸಂಸತ್ತಿನಲ್ಲಿ ಖರ್ಗೆ ಭಾವುಕ ನುಡಿ

ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿ ತೆರಳಿದ ನಂತರ, ಆ ವೇದಿಕೆಯನ್ನು ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳ ನಾಯಕರು ಗಂಗಾಜಲದಿಂದ ಶುದ್ಧೀಕರಣ ಮಾಡಿರುವ ಅಮಾನವೀಯ ಘಟನೆ ರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಈ ಘಟನೆಯನ್ನು ದಲಿತ ಸಮುದಾಯಕ್ಕೆ ಹಾಗೂ ತಮಗೆ ಆದ ಘೋರ ಅವಮಾನ ಎಂದು ಕರೆದಿರುವ ಖರ್ಗೆ, ಸಂಸತ್ತಿನ ಅಧಿವೇಶನದಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಸಂಸತ್ತಿನ

ದಲಿತನೆಂಬ ಕಾರಣಕ್ಕೆ ಬಿಜೆಪಿಯಿಂದ ವೇದಿಕೆಯ ಶುದ್ದೀಕರಣ| ಸಂಸತ್ತಿನಲ್ಲಿ ಖರ್ಗೆ ಭಾವುಕ ನುಡಿ Read More »

ಶಾಲಾ ಅಡುಗೆ ಸಿಬ್ಬಂದಿಯ ಪ್ರಾಣ ಉಳಿಸಿದ ವಿದ್ಯಾರ್ಥಿಯ ಸಮಯಪ್ರಜ್ಞೆ| ಬಂಟ್ವಾಳದ ಮನ್ವಿತ್ ಕಾರ್ಯಕ್ಕೆ ಸಿಎಂ ಮೆಚ್ಚುಗೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಓರ್ವ ವಿದ್ಯಾರ್ಥಿ ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿರುವಂತಹ ಘಟನೆ ನಡೆದಿದೆ. ಸದ್ಯ 5ನೇ ತರಗತಿ ವಿದ್ಯಾರ್ಥಿ ಮನ್ವಿತ್‌ನ ಸಮಯಪ್ರಜ್ಞೆ ಹಾಗೂ ಧೈರ್ಯಕ್ಕೆ ಶಿಕ್ಷಕರು ಸೇರಿದಂತೆ ಸಿಎಂ ಡಿಕೆ ಶಿವಕುಮಾರ್ ಕೂಡ ಭಾರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಅಕ್ಷರ ದಾಸೋಹ ಸಿಬ್ಬಂದಿಯೊಬ್ಬರು ವಿದ್ಯುತ್ ಚಾಲಿತ ಯಂತ್ರದಲ್ಲಿ ತೆಂಗಿನಕಾಯಿ ತುರಿಯುತ್ತಿದ್ದಾಗ, ಆಕಸ್ಮಿಕವಾಗಿ ಅವರ

ಶಾಲಾ ಅಡುಗೆ ಸಿಬ್ಬಂದಿಯ ಪ್ರಾಣ ಉಳಿಸಿದ ವಿದ್ಯಾರ್ಥಿಯ ಸಮಯಪ್ರಜ್ಞೆ| ಬಂಟ್ವಾಳದ ಮನ್ವಿತ್ ಕಾರ್ಯಕ್ಕೆ ಸಿಎಂ ಮೆಚ್ಚುಗೆ Read More »

ಸಂಸತ್ ಮುಂಗಾರು ಅಧಿವೇಶನದ ಕೊನೆಯ ದಿನವೂ ಗದ್ದಲ, ಗೊಂದಲ| ಅನಿರ್ದಿಷ್ಟಾವಧಿಗೆ ಲೋಕಸಭೆ ಮುಂದೂಡಿಕೆ

ಸಮಗ್ರ ನ್ಯೂಸ್: ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ದಿನವಾದ ಇಂದು ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆಯಿತು. ವಿದ್ಯಾರ್ಥಿಗಳ ಪ್ರತಿಭಟನೆ, ಪರೀಕ್ಷಾ ಅಕ್ರಮಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಸಂಸತ್ತಿನಲ್ಲಿ ಸೃಷ್ಟಿಯಾದ ಗದ್ದಲದ ಪರಿಣಾಮವಾಗಿ ಲೋಕಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ವಿಪಕ್ಷಗಳ ಗಲಾಟೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಲೋಕಸಭೆ ಕಲಾಪದಲ್ಲಿ ಭಾಗವಹಿಸಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಪಕ್ಷಗಳು

ಸಂಸತ್ ಮುಂಗಾರು ಅಧಿವೇಶನದ ಕೊನೆಯ ದಿನವೂ ಗದ್ದಲ, ಗೊಂದಲ| ಅನಿರ್ದಿಷ್ಟಾವಧಿಗೆ ಲೋಕಸಭೆ ಮುಂದೂಡಿಕೆ Read More »

ಜೈಲಿನಲ್ಲೂ ಅಶ್ಲೀಲ ಚಿತ್ರ ನೋಡುತ್ತಿದ್ದ ಪ್ರಜ್ವಲ್ ರೇವಣ್ಣ| ಮೊಬೈಲ್ ಬಳಕೆ, ಹಾಸಿಗೆ ಕೆಳಗೆ ಅರೆಬೆತ್ತಲೆ ಫೋಟೋ ಪತ್ತೆ

ಸಮಗ್ರ ನ್ಯೂಸ್: ಲೈಂಗಿಕ ಹಗರಣದಲ್ಲಿ ಜೈಲುಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿ ಎರಡು ವರ್ಷವಾದರೂ ಬುದ್ಧಿ ಕಲಿತಿಲ್ಲ. ಇದೀಗ ಜೈಲಿನಲ್ಲಿಯೂ ಸಹ ಅಶ್ಲೀಲ ಚಿತ್ರಗಳನ್ನು ಪ್ರಜ್ವಲ್ ರೇವಣ್ಣ ನೋಡುತ್ತಿದ್ದ ಎಂದು ತಿಳಿದು ಬಂದಿದೆ. ಅಂದಹಾಗೆ, ಎರಡು ದಿನಗಳ ಹಿಂದೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ನಡೆಸಿದ ದಾಳಿ ನಡೆಸಿತ್ತು. ಈ ವೇಳೆ ಅತ್ಯಾಚಾರ ಪ್ರಕರಣದ ಸಜಾ ಕೈದಿ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕೊಠಡಿಯಲ್ಲಿ (ಸೆಲ್) ಮೊಬೈಲ್

ಜೈಲಿನಲ್ಲೂ ಅಶ್ಲೀಲ ಚಿತ್ರ ನೋಡುತ್ತಿದ್ದ ಪ್ರಜ್ವಲ್ ರೇವಣ್ಣ| ಮೊಬೈಲ್ ಬಳಕೆ, ಹಾಸಿಗೆ ಕೆಳಗೆ ಅರೆಬೆತ್ತಲೆ ಫೋಟೋ ಪತ್ತೆ Read More »

ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ| ಆಘಾತ ತಾಳಲಾರದೆ ‌ಭಾವೀ ಪತಿಯೂ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಮದುವೆ ನಿಶ್ಚಯವಾಗಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಆಕೆಯ ಭಾವಿ ಪತಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡು ಪೂಚ್ಚಕ್ಕಾಡ್ ನಿವಾಸಿ ಪಿ. ಅನುಶ್ರೀ (25) ಮತ್ತು ಕಣ್ಣೂರು ಅಂಬಲತ್ತಟ್ಟು ನಿವಾಸಿ ವಿ. ಅಮಲ್ (27) ಮೃತಪಟ್ಟ ದುರದೃಷ್ಟಕರ ಜೋಡಿಯಾಗಿದ್ದಾರೆ. ಬ್ಯಾಂಕ್ ಉದ್ಯೋಗಿಗಳಾಗಿದ್ದ ಜೋಡಿ ಮೃತರಿಬ್ಬರೂ ಎಸ್‌ಬಿಐ ಉದ್ಯೋಗಿಗಳಾಗಿದ್ದು, ಅನುಶ್ರೀ ಅವರು ಕರ್ನಾಟಕದ ಮೈಸೂರು ಜಿಲ್ಲೆಯ ಹುಣಸೂರು ಶಾಖೆಯಲ್ಲಿ ಮತ್ತು ಅಮಲ್ ಎರ್ನಾಕುಲಂನ ಎಸ್‌ಬಿಐ

ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ| ಆಘಾತ ತಾಳಲಾರದೆ ‌ಭಾವೀ ಪತಿಯೂ ಆತ್ಮಹತ್ಯೆಗೆ ಶರಣು Read More »

ಮಂಗಳೂರು – ಬೆಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ರೈಲು ಸಂಚಾರ| ಕರಾವಳಿಗರ ಬಹುದಿನಗಳ ಕನಸು ನನಸು

ಸಮಗ್ರ ನ್ಯೂಸ್: ಕರಾವಳಿ ಭಾಗದ ರೈಲು ಪ್ರಯಾಣಿಕರ ಸುದೀರ್ಘ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಿದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಬೆಂಗಳೂರು-ಮಂಗಳೂರು ಸಂಪರ್ಕಿಸುವ ಅತ್ಯಂತ ಸವಾಲಿನ ಘಾಟ್ ರಸ್ತೆಯಲ್ಲಿ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಆಷಾಢ ಅಮಾವಾಸ್ಯೆಯ ಶುಭ ದಿನದಂದು ಚಾಲನೆ ನೀಡಿದೆ. ಕರಾವಳಿ ಭಾಗದ ರೈಲು ಪ್ರಯಾಣಿಕರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಿದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಇಂದಿನಿಂದ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಪ್ರಾಯೋಗಿಕ ಸಂಚಾರವನ್ನು

ಮಂಗಳೂರು – ಬೆಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ರೈಲು ಸಂಚಾರ| ಕರಾವಳಿಗರ ಬಹುದಿನಗಳ ಕನಸು ನನಸು Read More »

ಇಂದಿನಿಂದ ರಾಜ್ಯ ವಿಧಾನಮಂಡದಲ ಮುಂಗಾರು ಅಧಿವೇಶನ| ರಾಜ್ಯ ಸರ್ಕಾರದ ಕಿವಿ ಹಿಂಡಲು ಪ್ರತಿಪಕ್ಷಗಳು ಸಜ್ಜು

ಸಮಗ್ರ ನ್ಯೂಸ್: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇದು ಮೊದಲ ಪರೀಕ್ಷೆಯಾಗಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದ ಬಳಿಕ ವಿಧಾನಮಂಡಲದ ಉಭಯ ಸದನಗಳ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ನೂತನ ಸಚಿವ ಬಿ. ನಾಗೇಂದ್ರ ಅವರ ಸಂಪುಟ ಸೇರ್ಪಡೆ ಮತ್ತು ಬಿಡದಿ ಟೌನ್ ಶಿಪ್ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿ ಪಕ್ಷಗಳಾದ ಬಿಜೆಪಿ- ಜೆಡಿಎಸ್ ನಡುವೆ ಜಟಾಪಟಿ ನಡೆಯುವ ಸಾಧ್ಯತೆ ಇದೆ. ಮೊದಲ ದಿನ ಸಂಪ್ರದಾಯದಂತೆ ಆಗಲಿದ ಗಣ್ಯರಿಗೆ

ಇಂದಿನಿಂದ ರಾಜ್ಯ ವಿಧಾನಮಂಡದಲ ಮುಂಗಾರು ಅಧಿವೇಶನ| ರಾಜ್ಯ ಸರ್ಕಾರದ ಕಿವಿ ಹಿಂಡಲು ಪ್ರತಿಪಕ್ಷಗಳು ಸಜ್ಜು Read More »