ಸೆ.18: ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿಯಾದ ಬಳಿಕ ಡಿ.ಕೆ.ಶಿವಕುಮಾರ್‌ ಆಡಳಿತವನ್ನು ಜನರ ಬಳಿಗೆ ತೆಗೆದುಕೊಂಡು ಹೋಗಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಇದೇ ಮೊದಲ ಬಾರಿಗೆ ಕರಾವಳಿ ಪ್ರದೇಶಗಳಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮುಂದಾಗಿದ್ದಾರೆ.
ಸೆ. 18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ.

. Ad Widget . Ad Widget . Ad Widget .

ಈ ಮೊದಲು ಬೆಳಗಾವಿ, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚೆಗೆ ಸಚಿವ ಸಂಪುಟ ಸಭೆಗಳು ನಡೆದಿದ್ದವು. ಸಾಮಾನ್ಯವಾಗಿ ರಾಜಧಾನಿ ಬೆಂಗಳೂರಿನಲ್ಲೇ ಸಚಿವ ಸಂಪುಟ ಸಭೆಗಳು ನಡೆಯುವುದು ವಾಡಿಕೆ. ಪ್ರಾದೇಶಿಕವಾದ ಬೇಡಿಕೆಗಳು ಹಾಗೂ ಮಹತ್ವದ ಸಂದರ್ಭಗಳಲ್ಲಿ ಬೆಂಗಳೂರಿನ ಹೊರ ಭಾಗದಲ್ಲಿ ಸಚಿವ ಸಂಪುಟ ಸಭೆಗಳು ನಡೆಯಲಿವೆ. ಈಗ ಕರಾವಳಿ ಜಿಲ್ಲೆಗಳಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಸಂಪುಟ ಸಭೆ ನಡೆಸಲು ಚರ್ಚಿಸಲಾಗಿದೆ. ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುವುದಾಗಿ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿಯವರು ಸುಳಿವು ನೀಡಿದ್ದರು. ಈಗ ದಿನಾಂಕ ನಿಗದಿಯಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಅಭಿವೃದ್ಧಿ ಪ್ರಸ್ತಾವನೆಗಳಿಗೆ ವಿಶೇಷ ಆದ್ಯತೆ ನೀಡುವ ಸಾಧ್ಯತೆ ಇದೆ. ಸಭೆಗೆ ಮುನ್ನ ಕರಾವಳಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ಯೋಜನೆಗಳು ಮತ್ತು ಸಮಸ್ಯೆಗಳ ಕುರಿತು ಪ್ರಸ್ತಾವನೆಗಳನ್ನು ಸಿದ್ಧಪಡಿಸಿ, ಅಗತ್ಯ ಸಚಿವ ಸಂಪುಟ ಟಿಪ್ಪಣಿಗಳನ್ನು ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರು ಎಲ್ಲ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಭಿವೃದ್ಧಿ ವಿಚಾರಗಳು ಸಭೆಯಲ್ಲಿ ಪ್ರಮುಖವಾಗಿ ಚರ್ಚೆಗೆ ಬರುವ ನಿರೀಕ್ಷೆಯಿದೆ. ವಿಶೇಷವಾಗಿ ಕರಾವಳಿ ಪ್ರವಾಸೋದ್ಯಮ, ಮೂಲಸೌಕರ್ಯ, ರಸ್ತೆ-ಸಂಪರ್ಕ, ಬಂದರು, ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳ ಪ್ರಸ್ತಾವನೆಗಳಿಗೆ ಒತ್ತು ಸಿಗುವ ಸಾಧ್ಯತೆ ಇದೆ. ಇದರ ಜೊತೆಗೆ ಮಲ್ನಾಡ್‌-ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಮರಳು ಮತ್ತು ಲ್ಯಾಟರೈಟ್‌ ಗಣಿಗಾರಿಕೆಗೆ ಸಮಗ್ರ ನೀತಿ ಹಾಗೂ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ಸೇರಿದಂತೆ ಹಲವು ದೀರ್ಘಕಾಲದ ಬೇಡಿಕೆಗಳ ಬಗ್ಗೆಯೂ ನಿರೀಕ್ಷೆ ಮೂಡಿದೆ.

ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಇದೇ ಮೊದಲ ಬಾರಿಗೆ ಎನ್ನಲಾಗಿದ್ದು, ಕರಾವಳಿ ಭಾಗದ ಅಭಿವೃದ್ಧಿಗೆ ಸರ್ಕಾರದ ಆಡಳಿತಾತಕ ಗಮನವನ್ನು ಹೆಚ್ಚಿಸುವ ಮಹತ್ವದ ಹೆಜ್ಜೆ ಎಂದು ನಿರೀಕ್ಷಿಸಲಾಗಿದೆ.

Leave a Comment

Your email address will not be published. Required fields are marked *