ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ

ಸುಬ್ರಮಣ್ಯ: ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧಿಸಿ ಬಳ್ಪ ಹಾಗೂ ಸುಬ್ರಹ್ಮಣ್ಯದಲ್ಲಿ ಸೋಮವಾರ ಮಲೆನಾಡು ಜನಹಿತ ರಕ್ಷಣ ವೇದಿಕೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.

. Ad Widget . Ad Widget . Ad Widget .

ಬಳಿಕ ಬಳ್ಪ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸ ಲಾಯಿತು. ಎರಡನೇ ಹಂತದಲ್ಲಿ ಸುಬ್ರಹ್ಮಣ್ಯ ದಲ್ಲಿ ಪ್ರತಿಭಟನೆ ನಡೆಸಿ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸುಮಾರು 1,000ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣ ವೇದಿಕೆಯ ರಾಜ್ಯ ಸಂಚಾಲಕ ಕಿಶೋರ್ ಶಿರಾಡಿ ಮಾತನಾಡಿ, ಅಧಿಕಾರಿಗಳು ರೈತರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸುವ ರೀತಿಯಲ್ಲಿ ವರ್ತಿಸುತ್ತಿರುವುದು ಖಂಡನೀಯ. ಹಕ್ಕುಪತ್ರ ರದ್ದು ಹಾಗೂ ಒತ್ತುವರಿ ತೆರವು ಸೇರಿದಂತೆ ವಿವಿಧ ವಿಚಾರಗಳ ಕುರಿತು ಅಧಿಕಾರಿಗಳು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.

ಕೋರ್ಟ್ ಆದೇಶ ಯಾವುದೇ ಇದ್ದರೂ ಅಂತಿಮವಾಗಿ ಸರ್ಕಾರದ ಸಚಿವ ಸಂಪುಟದ ತೀರ್ಮಾನವೇ ಮುಖ್ಯವಾಗುತ್ತದೆ. ಆದ್ದರಿಂದ ರೈತರಿಗೆ ಮಾರಕವಾಗಬಹುದಾದ ಕಸ್ತೂರಿರಂಗನ್ ವರದಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಗಡಿ ಗುರುತು ನಿಗದಿಪಡಿಸುವ ಸಂದರ್ಭದಲ್ಲಿ ಶೂನ್ಯ ಬಫರ್ ಝೋನ್ ನಿಗದಿಪಡಿಸಬೇಕು. ಅಲ್ಲದೆ ಅರ್ಹರಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು. ಕಸ್ತೂರಿರಂಗನ್ ವರದಿಯಿಂದ ಸುಮಾರು 100 ಗ್ರಾಮಗಳು ಬಾಧಿತವಾಗುವ ಸಾಧ್ಯತೆ ಇದೆ. ಹೀಗಾಗಿ ವರದಿಯನ್ನು ಕೈಬಿಡುವ ನಿಟ್ಟಿನಲ್ಲಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು, ರೈತರು ಹಾಗೂ ಸ್ಥಳೀಯರು ಭಾಗವಹಿಸಿದ್ದರು.

Leave a Comment

Your email address will not be published. Required fields are marked *