ಡಿಜೆ ಸೌಂಡ್ಸ್ ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: DJ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದ ಪಿಯು ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ತಕ್ಷಣ ಸ್ನೇಹಿತರು ಆತನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸ್ನೇಹಿತನ ಮನೆಯ ಮದುವೆ ಸಂಭ್ರಮದಲ್ಲಿ DJ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯ ಕೋಸ್ಗಿಯಲ್ಲಿ ನಡೆದಿದೆ.

. Ad Widget . Ad Widget . Ad Widget .

ನಾರಾಯಣಪೇಟೆ ಜಿಲ್ಲೆಯ ಕೋಸ್ಗಿ ಪುರಸಭೆ ವ್ಯಾಪ್ತಿಯ ಪೊತಿರೆಡ್ಡಿಪಲ್ಲಿಗೆ ಸೇರಿದ ದಸ್ತಯ್ಯ ಹಾಗೂ ಲಕ್ಷ್ಮೀ ದಂಪತಿಯ ಪುತ್ರ ರವಿತೇಜ (17) ಮೃತಪಟ್ಟ ವಿದ್ಯಾರ್ಥಿ. ರವಿತೇಜ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಸೋಮವಾರ ರಾತ್ರಿ ಸ್ನೇಹಿತನ ಮನೆಯಲ್ಲಿ ಮದುವೆ ಕಾರ್ಯಕ್ರಮವಿದ್ದ ಹಿನ್ನೆಲೆಯಲ್ಲಿ ರವಿತೇಜ ಅಲ್ಲಿಗೆ ತೆರಳಿದ್ದನು. ಸ್ನೇಹಿತರೆಲ್ಲರೂ ಸೇರಿ ಮದುವೆ ಸಂಭ್ರಮದಲ್ಲಿ ಖುಷಿಯಿಂದ ಕಾಲ ಕಳೆಯುತ್ತಿದ್ದರು. ಈ ವೇಳೆ DJ ಹಾಡುಗಳಿಗೆ ಎಲ್ಲರೂ ಡ್ಯಾನ್ಸ್ ಮಾಡುತ್ತಿದ್ದರು.

ಆದರೆ, ಡ್ಯಾನ್ಸ್ ಮಾಡುತ್ತಿದ್ದ ರವಿತೇಜ ಹಠಾತ್ ಕುಸಿದು ಬಿದ್ದು ಪ್ರಜ್ಞೆ ತಪ್ಪಿದ್ದಾನೆ. ಕೂಡಲೇ ಸ್ನೇಹಿತರು ಹಾಗೂ ಸ್ಥಳೀಯರು ಆತನನ್ನು ಕೋಸ್ಗಿ ಸರ್ಕಾರಿ ಆಸ್ಪತ್ರೆಗೆ ತುರ್ತಾಗಿ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು, ರವಿತೇಜ ಈಗಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *