ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರ ಅನುಮೋದನೆಯ ಮೇರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕಾತಿ ಪ್ರಕಟಿಸಲಾಗಿದೆ. ಸೆ.9, 2026ರಿಂದಲೇ ನೇಮಕಾತಿಗಳು ಜಾರಿಗೆ ಬಂದಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್‌ನ ‘ಸಂಘಟನ ಸೃಜನ ಅಭಿಯಾನ’ ದ ಭಾಗವಾಗಿ ಈ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಪ್ರತಿ ಜಿಲ್ಲೆಯ ಎಐಸಿಸಿ ವೀಕ್ಷಕರು ಜಿಲ್ಲಾ ಮಟ್ಟದಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ವಿವಿಧ ಪ್ರಮುಖರೊಂದಿಗೆ ಸಮಗ್ರ ಸಮಾಲೋಚನೆ ನಡೆಸಿ ವರದಿ ಸಲ್ಲಿಸಿದ್ದರು. ಬಳಿಕ ವೀಕ್ಷಕರೊಂದಿಗೆ ಹಾಗೂ ಹಿರಿಯ ನಾಯಕರೊಂದಿಗೆ ಪ್ರತ್ಯೇಕ ಚರ್ಚೆ ನಡೆಸಿ ಅಧ್ಯಕ್ಷರ ನೇಮಕಾತಿ ಅಂತಿಮಗೊಳಿಸಲಾಗಿದೆ ಎಂದು ಎಐಸಿಸಿ ತಿಳಿಸಿದೆ.
ಇದೇ ವೇಳೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಕಿಶನ್ ಕುಮಾರ್ ಹೆಗ್ಡೆ ಅವರನ್ನು ನೇಮಕ ಮಾಡಲಾಗಿದೆ.










