ಸೆ.14ರಿಂದ ರಾಜ್ಯಾದ್ಯಂತ ಹಗುರ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರಿಯಲಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಒಟ್ಟು 21 ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ (Rain)ಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸದ್ಯ ಬಿಸಿಲಿನ ಜತೆಗೆ ಅಲ್ಲಲ್ಲಿ ಮೋಡದ ವಾತಾವರಣವಿರಲಿದೆ.

. Ad Widget . Ad Widget

ಶ್ರೀಲಂಕಾದಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಮೈಸೂರಿನ ಸುತ್ತಮುತ್ತ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಮುಂಬರುವ ಸೆಪ್ಟೆಂಬರ್ 14ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಪ್ರಬಲ ವಾಯುಭಾರ ಕುಸಿತವು ಉಂಟಾಗುವ ಲಕ್ಷಣಗಳು ಸ್ಪಷ್ಟವಾಗಿವೆ. ಈ ವಾಯುಭಾರ ಕುಸಿತದ ಪ್ರಭಾವದಿಂದ ಬಂಗಾಳಕೊಲ್ಲಿಯ ಗಾಳಿಯು ದಕ್ಷಿಣದತ್ತ ಸೆಳೆಯಲ್ಪಡುತ್ತದೆ.

. Ad Widget . . Ad Widget . Ad Widget

ದಕ್ಷಿಣ ಒಳನಾಡು ಮತ್ತು ಮಲೆನಾಡಿನ 12 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ (ಗಂಟೆಗೆ 30-40 ಕಿ.ಮೀ ವೇಗ) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕರಾವಳಿಯ 3 ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ 6 ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ಉಳಿದಂತೆ ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ ಹಾಗೂ ಹಾವೇರಿ ಸೇರಿದಂತೆ 10 ಜಿಲ್ಲೆಗಳಲ್ಲಿ ಪ್ರಮುಖವಾಗಿ ಒಣಹವೆ ಮುಂದುವರಿಯಲಿದೆ.

Leave a Comment

Your email address will not be published. Required fields are marked *