ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರೈ ಆರೋಗ್ಯ ವಿಚಾರಿಸಿದ ಸಂಸದ ಚೌಟ

ಸಮಗ್ರ ನ್ಯೂಸ್: ಮೂಡುಬಿದಿರೆ ಮತ್ತು ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಹಿರಿಯ ನಾಯಕ, ಮಾಜಿ ಸಚಿವ ರಮಾನಾಥ್ ರೈ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಸ್ತುತ ಅವರ ಚೇತರಿಕೆ ಕಂಡುಬರುತ್ತಿದೆ.

. Ad Widget . Ad Widget . Ad Widget

ವಿಷಯ ತಿಳಿಯುತ್ತಿದ್ದಂತೆಯೇ ಮಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ರಮಾನಾಥ್ ರೈ ಅವರನ್ನು ನೇರವಾಗಿ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. ಇದೇ ವೇಳೆ ಘಟನೆಯಲ್ಲಿ ಗಾಯಗೊಂಡಿದ್ದ ಅವರ ಆಪ್ತ ಕಾರ್ಯದರ್ಶಿ ಹಾಗೂ ಕಾರು ಚಾಲಕ ಡೆನ್ಜಿಲ್ ಸೇರಿ ಇತರ ಗಾಯಾಳುಗಳ ಪರಾಮರ್ಶೆ ನಡೆಸಿದ ಸಂಸದರು, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು

. Ad Widget .

Leave a Comment

Your email address will not be published. Required fields are marked *