ರಾಜ್ಯದ ಹಲವು ಜಿಲ್ಲೆಗಳಿಗೆ ಭಾರೀ ಮಳೆ‌‌ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ತಿಳಿಸಿದೆ. ಸೆಪ್ಟೆಂಬರ್ 22ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

. Ad Widget . Ad Widget

ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡದಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

. Ad Widget . . Ad Widget . Ad Widget

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗಬಹುದು. ಬೆಂಗಳೂರು ನಗರದಲ್ಲಿ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಸೆಪ್ಟೆಂಬರ್ 23ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರಿ-ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬಾಗಲಕೋಟೆ, ಬೀದರ್, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದು. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 23 ಹಾಗೂ 24 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಸಹ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.

Leave a Comment

Your email address will not be published. Required fields are marked *