ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ| ಅಕ್ರಮ ಆಸ್ತಿ ಕಂಡು ಸುಸ್ತಾದ ಅಧಿಕಾರಿಗಳು

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದಾರೆ.

. Ad Widget . Ad Widget

ಬೆಂಗಳೂರು, ಚಿಕ್ಕಬಳ್ಳಾಪುರ, ಕಲಬುರಗಿ, ಬೆಂಗಳೂರು ದಕ್ಷಿಣ, ಮಂಡ್ಯ, ಕೊಡಗು, ಧಾರವಾಡ ಹಾಗೂ ಬೀದರ್ ಜಿಲ್ಲೆಗಳಲ್ಲಿ ಈ ಕಾರ್ಯಾಚರಣೆ ನಡೆದಿದೆ. ಆರೋಪಿತ ಅಧಿಕಾರಿಗಳು, ಅವರ ಸಂಬಂಧಿಕರು ಹಾಗೂ ಆಪ್ತರಿಗೆ ಸೇರಿದ 33ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

. Ad Widget . . Ad Widget . Ad Widget

ಬಸವನಗುಡಿಯ ಜಿಲ್ಲಾ ನೋಂದಣಾಧಿಕಾರಿ ಶ್ರೀದೇವಿ ಅವರ ಬಳಿ ಅತಿ ಹೆಚ್ಚು ಅಕ್ರಮ ಆಸ್ತಿ ಪತ್ತೆಯಾಗಿದೆ. ಅವರ ಬಳಿ ಒಟ್ಟು ₹6.80 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದ್ದು, ಇದರಲ್ಲಿ ₹5.86 ಕೋಟಿ ಮೌಲ್ಯದ ಸ್ಥಿರಾಸ್ತಿಗಳು ಸೇರಿವೆ. ಎರಡು ನಿವೇಶನಗಳು, ಎರಡು ಮನೆಗಳು, ಕೃಷಿ ಭೂಮಿ ಹಾಗೂ ಗಾರ್ಮೆಂಟ್ ಫ್ಯಾಕ್ಟರಿ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದರ ಜೊತೆಗೆ ₹30.87 ಲಕ್ಷ ನಗದು, ₹35.58 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು, ₹23.15 ಲಕ್ಷ ಮೌಲ್ಯದ ವಾಹನಗಳು ಹಾಗೂ ₹5 ಲಕ್ಷ ಮೌಲ್ಯದ ಇತರ ವಸ್ತುಗಳು ಪತ್ತೆಯಾಗಿವೆ.

ಮಂಡ್ಯ ಜಿಲ್ಲೆಯ ಮದ್ದೂರಿನ ಬಿಸಿಎಂ ಇಲಾಖೆ ಹಾಸ್ಟೆಲ್ ಸೂಪರಿಟೆಂಡೆಂಟ್ ಎಂ. ಶಿವರಾಜು ಅವರ ಬಳಿ ₹2.71 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಬೆಂಗಳೂರಿನ ಶಿವಾಜಿನಗರದ ನಿವೃತ್ತ ಜಿಬಿಎ ಸಹಾಯಕ ಎಂಜಿನಿಯರ್ ಎಚ್.ಎಂ. ರಂಗನಾಥ್ ಅವರ ಬಳಿ ₹3.84 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.

ಕಲಬುರಗಿಯ ಜೆಸ್ಕಾಂ ಎಇಇ ರಾಜೇಶ್ವರಿ ಅವರ ಬಳಿ ₹1.91 ಕೋಟಿ, ಕೊಡಗಿನ ಪುರಸಭೆ ಆಯುಕ್ತ ಎಚ್.ಆರ್. ರಮೇಶ್ ಅವರ ಬಳಿ ₹1.78 ಕೋಟಿ ಹಾಗೂ ಧಾರವಾಡದ ಹೆಸ್ಕಾಂ ಎಇಇ ಕಿರಣ್ ಬೈಂದೂರ್ ಅವರ ಬಳಿ ₹1.79 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯ ಎಫ್‌ಡಿಎ ದರ್ಶನ್ ಗೌಡ ಜಿ. ಅವರ ಬಳಿ ₹1.86 ಕೋಟಿ ಮೌಲ್ಯದ ಆಸ್ತಿ ಹಾಗೂ ಬೀದರ್‌ನ ನಿವೃತ್ತ ಕೃಷಿ ಅಧಿಕಾರಿ ಮಾಣಿಕ್ ರಾವ್ ಅವರ ಬಳಿ ₹2.51 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳ ಆಧಾರದ ಮೇಲೆ ಈ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯ ವೇಳೆ ಪತ್ತೆಯಾದ ಆಸ್ತಿ, ನಗದು, ಚಿನ್ನಾಭರಣ, ದಾಖಲೆಗಳು ಹಾಗೂ ಇತರ ವಸ್ತುಗಳ ಕುರಿತು ಪರಿಶೀಲನೆ ಮುಂದುವರಿದಿದ್ದು, ಪ್ರಕರಣಗಳ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

Leave a Comment

Your email address will not be published. Required fields are marked *