ರಾಜ್ಯದ ಜನತೆಗೆ ಮತ್ತೆ ಶಾಕ್| ಐದು ರೂಪಾಯಿಯಷ್ಟು ತುಟ್ಟಿಯಾಗಲಿದೆ ನಂದಿನಿ ಹಾಲು

ಸಮಗ್ರ ನ್ಯೂಸ್: ಸಾಮಾನ್ಯ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದೆ. ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂಪಾಯಿಗಳಷ್ಟು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಅಂತಿಮವಾಗಿ ಸಮ್ಮತಿ ಸೂಚಿಸಿದೆ. ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.

. Ad Widget . Ad Widget

ಹಾಲು ಉತ್ಪಾದನಾ ಹಾಗೂ ನಿರ್ವಹಣಾ ವೆಚ್ಚಗಳು ತೀವ್ರವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ನಂದಿನಿ ಹಾಲಿನ ಮಾರಾಟ ದರವನ್ನು ಹೆಚ್ಚಿಸಬೇಕು ಎಂದು ರಾಜ್ಯದ 16 ಹಾಲು ಒಕ್ಕೂಟಗಳ ಸಂಘವು ಸರ್ಕಾರಕ್ಕೆ ತೀವ್ರ ಒತ್ತಡ ಹೇರಿತ್ತು. ಆರಂಭದಲ್ಲಿ ಪ್ರತಿ ಲೀಟರ್‌ಗೆ ಬರೋಬ್ಬರಿ 10 ರೂ.ಗಳಷ್ಟು ಏರಿಕೆ ಮಾಡುವಂತೆ ಒಕ್ಕೂಟಗಳು ಬೇಡಿಕೆ ಇಟ್ಟಿದ್ದವು. ಒಂದು ವೇಳೆ ದರ ಏರಿಕೆ ಮಾಡದಿದ್ದರೆ ‘ವಿಧಾನಸೌಧ ಚಲೋ’ ನಡೆಸುವುದಾಗಿಯೂ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದವು.

. Ad Widget . . Ad Widget . Ad Widget

ಒಕ್ಕೂಟಗಳ ಈ ಎಚ್ಚರಿಕೆ ಹಾಗೂ ಹಾಲು ಉತ್ಪಾದಕರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಅಂತಿಮವಾಗಿ ಮಧ್ಯಮ ಮಾರ್ಗವನ್ನು ಕಂಡುಕೊಂಡಿದೆ. ಗ್ರಾಹಕರಿಗೆ ವಿಪರೀತ ಆರ್ಥಿಕ ಹೊರೆಯೂ ಆಗಬಾರದು ಹಾಗೂ ರೈತರಿಗೂ ಮತ್ತು ಉತ್ಪಾದಕರಿಗೂ ಅನುಕೂಲವಾಗಬೇಕು ಎಂಬ ಉದ್ದೇಶದಿಂದ ಸರ್ಕಾರವು ಹಾಲಿನ ದರವನ್ನು ಲೀಟರ್‌ಗೆ 4 ರಿಂದ 5 ರೂ.ಗಳವರೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ.

ಹಾಲು ಉತ್ಪಾದಕ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ದರ ಏರಿಕೆ ಅನಿವಾರ್ಯವಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿದ್ದು, ಪರಿಷ್ಕೃತ ದರವು ಶೀಘ್ರದಲ್ಲೇ ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ.

Leave a Comment

Your email address will not be published. Required fields are marked *