ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಲು ವಿಪಕ್ಷಗಳ ಪಟ್ಟು

ಸಮಗ್ರ ನ್ಯೂಸ್: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಸೇರಿದಂತೆ ವಿವಿಧ ವಿಷಯಗಳಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್‌ ಕುಮಾರ್‌ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂಬ ಆರೋಪಗಳು ಬಂದ ಬೆನ್ನಲ್ಲೇ, ಅವರನ್ನು ಹುದ್ದೆಯಿಂದ ತೆರವುಗೊಳಿಸಬೇಕು ಎಂದು ಕಾಂಗ್ರೆಸ್‌, ತೃಣಮೂಲ ಕಾಂಗ್ರೆಸ್‌, ಎಡಪಕ್ಷಗಳು ಸೇರಿದಂತೆ ವಿವಿಧ ವಿರೋಧ ಪಕ್ಷಗಳು ಗುರುವಾರ ಒತ್ತಾಯಿಸಿವೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಇದಕ್ಕೆ ಧ್ವನಿಗೂಡಿಸಿದೆ.

. Ad Widget . Ad Widget

ಸಿಇಸಿ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್‌ ದೇಶದಾದ್ಯಂತ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿದ್ದರೆ, ಇನ್ನೊಂದೆಡೆ, 48 ಗಂಟೆಗಳಲ್ಲಿ ಸಿಇಸಿ ರಾಜೀನಾಮೆ ನೀಡದಿದ್ದರೆ ‘ಜಂತರ್ ಮಂತರ್ 2.0’ ಪ್ರತಿಭಟನೆ ಆರಂಭಿಸುವುದಾಗಿ ಸಿಜೆಪಿ ಎಚ್ಚರಿಕೆ ನೀಡಿದೆ. ಅಲ್ಲದೆ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಸಿಇಸಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

. Ad Widget . . Ad Widget . Ad Widget

ಈ ವಿವಾದದ ಕುರಿತು ಹೋರಾಟದ ರೂಪುರೇಷೆ ಸಿದ್ಧಪಡಿಸಲು ಕಾಂಗ್ರೆಸ್‌, ಇದೇ 29ರಂದು ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ನಡೆಸಲು ನಿರ್ಧರಿಸಿದೆ. ಸಿಇಸಿ ಪದಚ್ಯುತಿ ಪ್ರಕ್ರಿಯೆಗೆ ಪಕ್ಷವು ಹೊಸ ನೋಟಿಸ್‌ ಸಲ್ಲಿಸುವ ಸಾಧ್ಯತೆಯಿದೆ ಎಂದೂ ಗೊತ್ತಾಗಿದೆ.

Leave a Comment

Your email address will not be published. Required fields are marked *