ಮಂಗಳೂರು: ಬಾಲ್ಕನಿ‌ ಕುಸಿತಗೊಂಡು ವಿದ್ಯಾರ್ಥಿ ಸಾವು| ಕಟ್ಟಡ ಮಾಲೀಕ ಮತ್ತು ಆಯೋಜಕರ ವಿರುದ್ದ ಎಫ್ಐಆರ್

ಸಮಗ್ರ ನ್ಯೂಸ್: ವಿದ್ಯಾರ್ಥಿಗಳ ಕಾರ್ಯಕ್ರಮದ ವೇಳೆ ತಡೆಗೋಡೆ ಕುಸಿದು 16 ವರ್ಷದ ವಿದ್ಯಾರ್ಥಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.

. Ad Widget . Ad Widget . Ad Widget

ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನಲ್ಲಿ ನಡೆದಿದ್ದ ಈ ಘಟನೆಯಲ್ಲಿ ಮೃತ ವಿದ್ಯಾರ್ಥಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

. Ad Widget .

ಕಟ್ಟಡದ ಮಾಲೀಕ ಪರೀಕ್ಷಿತ್ ರೈ ಹಾಗೂ ಕಾರ್ಯಕ್ರಮದ ಆಯೋಜಕ, ವಕೀಲ ದಿನಕರ್ ಶೆಟ್ಟಿ ವಿರುದ್ಧ FIR ದಾಖಲಾಗಿದೆ. ಕಟ್ಟಡದ ಸ್ಥಿತಿ ದುರ್ಬಲವಾಗಿದ್ದರೂ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗಿತ್ತು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕೈಗೊಂಡಿರಲಿಲ್ಲ ಎಂದು ಮೃತ ವಿದ್ಯಾರ್ಥಿಯ ತಂದೆ ಮೊಹಮ್ಮದ್ ಇಲಿಯಾಸ್ ದೂರಿನಲ್ಲಿ ಆರೋಪಿಸಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಳೆಯಂಗಡಿ ನಿವಾಸಿ ಮೊಹಮ್ಮದ್ ಶಮಾಜ್ (16) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಶಮಾಜ್ ಸೇಂಟ್ ಅಲೋಶಿಯಸ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾಗಿದ್ದರು. ಶನಿವಾರ ರಾತ್ರಿ 11.33ರ ಸುಮಾರಿಗೆ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.

Leave a Comment

Your email address will not be published. Required fields are marked *