ಸಮಗ್ರ ನ್ಯೂಸ್: ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‌ಬಿಯು) ವತಿಯಿಂದ ಸೆಪ್ಟೆಂಬರ್ 28ರ ಇಂದಿನಿಂದ 30 ರವರೆಗೆ ಮೂರು ದಿನಗಳ ಕಾಲ ದೇಶವ್ಯಾಪಿ ಬ್ಯಾಂಕ್ ಮುಷ್ಕರ ರದ್ದಾಗಿದೆ. ಒಕ್ಕೂಟಗಳು ದಿಢೀರ್ ಈ ನಿರ್ಧಾರ ಕೈಗೊಂಡಿದ್ದು ಬ್ಯಾಂಕ್ ಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
ವಾರಾಂತ್ಯದ ರಜೆಗಳು ಹಾಗೂ ಸತತ ಮೂರು ದಿನಗಳ ಮುಷ್ಕರದಿಂದ ಸಾರ್ವಜನಿಕರಿಗೆ ನಿರಂತರವಾಗಿ ಬ್ಯಾಂಕಿಂಗ್ ಸೇವೆಗಳು ಸ್ಥಗಿತಗೊಳ್ಳಬಾರದು ಎಂಬ ಉದ್ದೇಶದಿಂದ ಸೆಪ್ಟೆಂಬರ್ 27ರ ಭಾನುವಾರದಂದು ಸಾರ್ವಜನಿಕ ವಲಯದ ಎಲ್ಲಾ ಬ್ಯಾಂಕ್‌ಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು (ಆರ್‌ಆರ್‌ಬಿ) ಎಂದಿನಂತೆ ಕಾರ್ಯನಿರ್ವಹಿಸಿದ್ದವು.
ವಾರದಲ್ಲಿ ಐದು ದಿನಗಳ ಬ್ಯಾಂಕಿಂಗ್ ಕೆಲಸದ ಅವಧಿ, ಪಿಂಚಣಿ ಪರಿಷ್ಕರಣೆ, ಎಲ್ಲ ಪಿಂಚಣಿದಾರರಿಗೆ ಸಮಾನ ತುಟ್ಟಿಭತ್ಯೆ ಸೂತ್ರ ಹಾಗೂ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ (ಎನ್‌ಪಿಎಸ್) ಹಳೆ ಪಿಂಚಣಿ ಯೋಜನೆಗೆ (ಒಪಿಎಸ್) ಬದಲಾಗಲು ಅವಕಾಶ ನೀಡುವುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಯೂನಿಯನ್‌ಗಳು ಮುಷ್ಕರಕ್ಕೆ ಮುಂದಾಗಿದ್ದವು.









