ಸಮಗ್ರ ನ್ಯೂಸ್: ಸೆಪ್ಟೆಂಬರ್ 30ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ಬಳ್ಳಾರಿ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೆಲವೆಡೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು.
ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ರಾಮನಗರ, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.









