ಸಮಗ್ರ ನ್ಯೂಸ್: ಮಂಗಳೂರಿನ MRPL ಭಾಗದಲ್ಲಿ ಬುಧವಾರ ಸಂಭವಿಸಿದ ಭಾರೀ ಸ್ಫೋಟಕ್ಕೆ ಜೋಕಟ್ಟೆ ಸುತ್ತಮುತ್ತಲಿನ ಹಲವು ಮನೆಗಳು ಹಾಗೂ ಕಟ್ಟಡಗಳು ಕಂಪಿಸಿವೆ ಎಂದು ವರದಿಯಾಗಿದೆ.
ಸ್ಫೋಟದ ತೀವ್ರತೆಗೆ ಮನೆಗಳ ಬಾಗಿಲು, ಕಿಟಕಿ ಹಾಗೂ ಗಾಜುಗಳು ಹಾನಿಗೊಳಗಾಗಿದ್ದು, ಕೆಲವು ಕಟ್ಟಡಗಳ ಗೋಡೆಗಳಿಗೂ ಹಾನಿಯಾಗಿದೆ ಎನ್ನಲಾಗಿದೆ. ಬಜಪೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಸ್ಫೋಟದ ಕಂಪನ ಅನುಭವವಾಗಿದೆ.
ಸ್ಫೋಟದ ಬಳಿಕ ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದ್ದು, ದೂರದ ಪ್ರದೇಶಗಳಿಂದಲೂ ಹೊಗೆ ಗೋಚರಿಸಿದೆ. ಸ್ಫೋಟಕ್ಕೆ ನಿಖರ ಕಾರಣ ಹಾಗೂ ಘಟನೆಯಲ್ಲಿ ಯಾವುದೇ ಹಾನಿ ಅಥವಾ ಸಾವು-ನೋವಿನ ಬಗ್ಗೆ ಇನ್ನೂ ವರದಿಯಾಗಿಲ್ಲ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಿತ ಅಧಿಕಾರಿಗಳು ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳದತ್ತ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.









