ಸಮಗ್ರ ನ್ಯೂಸ್: ಮಂಗಳೂರಿನ ಜೋಕಟ್ಟೆಯಲ್ಲಿರುವ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್)ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಘಟನೆ ನಡೆದಿದೆ. ‘ಅವಘಡದಲ್ಲಿ 9 ಕಾರ್ಮಿಕರಿಗೆ ಗಾಯಗಳಾಗಿದ್ದು, ಪ್ರಸ್ತುತ ಬೆಂಕಿ ನಿಯಂತ್ರಣಕ್ಕೆ ಬಂದಿದೆ’ ಎಂದು ಮಂಗಳೂರು ಜಿಲ್ಲಾಧಿಕಾರಿ ದರ್ಶನ್ ಹೆಚ್ವಿ ಮಾಹಿತಿ ನೀಡಿದ್ದಾರೆ.
ಸುರತ್ಕಲ್ ನಿವಾಸಿ ರಾಜೇಶ್ಗೆ ಶೇಕಡಾ 35ರಷ್ಟು ಗಾಯಗಳಾಗಿದ್ದು, ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪ್ರಸಾದ್, ಇಂದ್ರಜೀತ್, ರಾಮನ್ಗೆ ಎಜಿ ಆಸ್ಪತ್ರೆಗೆ ಮತ್ತು ಗಾಯಾಳುಗಳಾದ ಜೆರೋಮ್, ಜಯರಾಮ್, ಅವಿನಾಶ್ ಹಾಗೂ ಅಕ್ಷಯ್ ಎಂಬುವರಿಗೆ MRPL ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ 12.15 ಗಂಟೆಗೆ ಎಂಆರ್ಪಿಎಲ್ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. 11.30 ಗಂಟೆಗೆ ಶಿಫ್ಟ್ ಬದಲಾವಣೆ ಹಿನ್ನೆಲೆ ಘಟಕದಿಂದ ಕಾರ್ಮಿಕರು ಹೊರ ಹೋಗಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಆದರೆ 9 ಕಾರ್ಮಿಕರು ಗಾಯಗೊಂಡಿದ್ದಾರೆ. ಒಂದೆ ವೇಳೆ ಕಾರ್ಮಿಕರು ಒಳಗೆ ಇದ್ದಿದ್ದರೆ ಭಾರೀ ಸಾವು ನೋವು ಸಾಧ್ಯತೆ ಇತ್ತು ಎನ್ನಲಾಗಿದೆ.









