ಮಂಗಳೂರು: ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಪ್ರಕರಣ| ಓರ್ವ ಕಾರ್ಮಿಕನ ಮೃತದೇಹ ಪತ್ತೆ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಸುರತ್ಕಲ್‌ ಬಳಿಯ ಎಂಆರ್‌ಪಿಎಲ್‌ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭಾರೀ ಸ್ಫೋಟ ಸಂಭವಿಸಿರುವ ಪ್ರದೇಶದಲ್ಲಿ ಕಾರ್ಮಿಕನೊಬ್ಬನ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

. Ad Widget . Ad Widget . Ad Widget

ಸ್ಫೋಟದ ಬಳಿಕ ಕಾರ್ಮಿಕನೊಬ್ಬ ನಾಪತ್ತೆಯಾಗಿದ್ದ. ಆತನ ಮೃತದೇಹ ಘಟಕದಿಂದ ಸ್ವಲ್ಪ ದೂರದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಕಾರ್ಮಿಕನನ್ನು ಮೂಲ್ಕಿಯ ಮನೀಶ್‌ ಕರ್ಕೇರಾ (30) ಎಂದು ಗುರುತಿಸಲಾಗಿದೆ. ಆತ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಎಂದು ನಗರ ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.

. Ad Widget .

ಈ ದುರ್ಘಟನೆಯಲ್ಲಿ ಇನ್ನೊಬ್ಬ ಕಾರ್ಮಿಕ ರಾಜೇಶ್‌ ಬ್ಯಾಪ್ಟಿಸ್ಟ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟ ಸಂಭವಿಸಿದ ಘಟಕದ ಪಕ್ಕದ ಕಚೇರಿಯಲ್ಲಿದ್ದ 8 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಎಂಆರ್‌ಪಿಎಲ್‌ನ ಕಳವಾರು ಪ್ರದೇಶದಲ್ಲಿದ್ದ ಹೈಡ್ರೊ ಸಲ್ಫರ್ ಸಂಸ್ಕರಣಾ (ಸಿಎಚ್‌ಟಿ) ಘಟಕದಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *