ಮಡಗಾಂವ್ – ಮಂಗಳೂರು ವಂದೇಭಾರತ್ ಎಕ್ಸ್‌ಪ್ರೆಸ್ ಬೆಂಗಳೂರಿನವರೆಗೆ ವಿಸ್ತರಣೆಗೆ ಗ್ರೀನ್ ಸಿಗ್ನಲ್

ಸಮಗ್ರ ನ್ಯೂಸ್: ಬೆಂಗಳೂರು, ಕರಾವಳಿ ಕರ್ನಾಟಕ ಹಾಗೂ ಗೋವಾ ನಡುವಿನ ರೈಲು ಸಂಪರ್ಕ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಹಾಸನ, ಮಂಗಳೂರು ಜಂಕ್ಷನ್‌, ಉಡುಪಿ ಹಾಗೂ ಕಾರವಾರ ಮಾರ್ಗವಾಗಿ ಸಂಚರಿಸುವಂತೆ ಮಡಗಾಂವ್‌- ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ ಸೇವೆಯನ್ನು ಬೆಂಗಳೂರಿನವರೆಗೆ ವಿಸ್ತರಿಸಲು ರೈಲ್ವೆ ಸಚಿವಾಲಯ ಅವಕಾಶ ನೀಡಿದೆ.

. Ad Widget . Ad Widget . Ad Widget

ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಈ ಮಾರ್ಗದಲ್ಲಿ ವಂದೇ ಭಾರತ್‌ ಸೇವೆ ವಿಸ್ತರಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದರು. ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆ ಹಾಗೂ ಪ್ರವಾಸೋದ್ಯಮ, ಧಾರ್ಮಿಕ ಯಾತ್ರೆ, ಶಿಕ್ಷಣ ಮತ್ತು ವೃತ್ತಿಪರ ಪ್ರಯಾಣದ ದೃಷ್ಟಿಯಿಂದ ಈ ಮಾರ್ಗದ ಮಹತ್ವವನ್ನು ಅವರು ತಮ್ಮ ಮನವಿಯಲ್ಲಿ ವಿವರಿಸಿದ್ದರು.

. Ad Widget .

ಹಾಸನ, ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಬೆಂಗಳೂರಿನವರೆಗೆ ಇರುವ ಮಡಗಾಂವ್-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಯನ್ನು ವಿಸ್ತರಿಸುವ ಮೂಲಕ ಬೆಂಗಳೂರು, ಕರಾವಳಿ ಕರ್ನಾಟಕ ಮತ್ತು ಗೋವಾ ನಡುವಿನ ರೈಲು ಸಂಪರ್ಕಕ್ಕೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ.

ಹಾಸನ, ಮಂಗಳೂರು ಜಂಕ್ಷನ್, ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಬೆಂಗಳೂರು ಮತ್ತು ಮಡಗಾಂವ್‌ಗಳನ್ನು ಸಂಪರ್ಕಿಸುವ ವಂದೇ ಭಾರತ್ ಸೇವೆಯನ್ನು ವಿಸ್ತರಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಲ್ಲಿಸಿದ್ದ ಪ್ರಸ್ತಾವನೆಯ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಬರೆದ ಪತ್ರದಲ್ಲಿ, ಪ್ರವಾಸೋದ್ಯಮ, ಧಾರ್ಮಿಕ ಯಾತ್ರೆ, ಶಿಕ್ಷಣ ಮತ್ತು ವೃತ್ತಿಪರ ಕೆಲಸಗಳಿಗಾಗಿ ಪ್ರಯಾಣಿಸುವವರಿಗೆ ಅನುಕೂಲವಾಗುವ ಈ ಕಾರಿಡಾರ್‌ನ ಮಹತ್ವವನ್ನು ಕುಮಾರಸ್ವಾಮಿ ಅವರು ಒತ್ತಿ ಹೇಳಿದ್ದರು. ಅಲ್ಲದೆ, ಬೆಂಗಳೂರು, ಕರಾವಳಿ ಕರ್ನಾಟಕ ಮತ್ತು ಗೋವಾದ ಪ್ರಮುಖ ವಾಣಿಜ್ಯ, ಬಂದರು ಮತ್ತು ಪ್ರವಾಸೋದ್ಯಮ ಕೇಂದ್ರಗಳ ನಡುವೆ ಬಲವಾದ ಸಂಪರ್ಕದ ಅಗತ್ಯವನ್ನೂ ಅವರು ಪ್ರತಿಪಾದಿಸಿದ್ದರು.

Leave a Comment

Your email address will not be published. Required fields are marked *