ರಾಜ್ಯಾದ್ಯಂತ ‘ಹಾಫ್ ಹೆಲ್ಮೆಟ್’ ಬಳಕೆ ಸಂಪೂರ್ಣ ನಿಷೇಧ

ಸಮಗ್ರ ನ್ಯೂಸ್: ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸಲು ಹಾಗೂ ಅಪಘಾತದ ವೇಳೆ ಸಂಭವಿಸುವ ಪ್ರಾಣಾಪಾಯವನ್ನು ತಡೆಗಟ್ಟಲು ಕರ್ನಾಟಕ ಸಾರಿಗೆ ಇಲಾಖೆಯು ಹಾಫ್ ಹೆಲ್ಮೆಟ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ.

. Ad Widget . Ad Widget . Ad Widget

ಕೇವಲ ಹೆಸರಿಗಷ್ಟೇ ಎಂಬಂತೆ ಸಣ್ಣ ಹಾಫ್ ಹೆಲ್ಮೆಟ್‌ಗಳನ್ನು ಧರಿಸಿ ಸಂಚರಿಸುವುದನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ಸವಾರರು ಕಡ್ಡಾಯವಾಗಿ ಬಿಐಎಸ್/ಐಎಸ್‌ಐ (BIS/ISI) ಗುಣಮಟ್ಟದ ಮಾನದಂಡ ಹೊಂದಿರುವ ಹೆಲ್ಮೆಟ್‌ಗಳನ್ನೇ ಧರಿಸಬೇಕು ಎಂದು ಸೂಚಿಸಲಾಗಿದೆ.

. Ad Widget .

ಸವಾರರು ಮಾತ್ರವಲ್ಲದೆ, ಇಂತಹ ಕಳಪೆ ಗುಣಮಟ್ಟದ ಹಾಫ್ ಹೆಲ್ಮೆಟ್‌ಗಳನ್ನು ತಯಾರಿಸುವವರು ಹಾಗೂ ಮಾರಾಟ ಮಾಡುವ ಅಂಗಡಿ ಮಾಲೀಕರ ವಿರುದ್ಧವೂ ಕಾನೂನು ಕ್ರಮ ಜರುಗಿಸುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಹೆಲ್ಮೆಟ್ ಧರಿಸದೆ ಅಥವಾ ಅಮಾನ್ಯವಾದ ಹಾಫ್ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸಿದರೆ ಸವಾರರಿಗೆ 500 ರೂ. ದಂಡ ವಿಧಿಸಲಾಗುತ್ತದೆ. ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯವಾಗಿದ್ದು, ನಿಯಮ ಮೀರಿದರೆ ಅವರಿಗೂ ಇದೇ ದಂಡ ಅನ್ವಯವಾಗುತ್ತದೆ. ಸತತವಾಗಿ ನಿಯಮ ಉಲ್ಲಂಘಿಸಿದಲ್ಲಿ ದಂಡದ ಮೊತ್ತ 1,000 ರೂ.ಗೆ ಏರಿಕೆಯಾಗುವುದರ ಜೊತೆಗೆ ಮೂರು ತಿಂಗಳ ಕಾಲ ಚಾಲನಾ ಪರವಾನಗಿ (ಡಿಎಲ್) ಅಮಾನತು ಮಾಡುವ ಅವಕಾಶವೂ ಕಾನೂನಿನಲ್ಲಿದೆ.

Leave a Comment

Your email address will not be published. Required fields are marked *