ಮೈಸೂರು: ನಾಡಹಬ್ಬ ದಸರಾಗೆ ಅದ್ದೂರಿ ಚಾಲನೆ ನೀಡಿದ‌ ಗವಿಸಿದ್ದೇಶ್ವರ ಶ್ರೀ

ಸಮಗ್ರ ನ್ಯೂಸ್: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೊಂಡಿದೆ. ಚಾಮುಂಡಿ ಬೆಟ್ಟದಲ್ಲಿ ನಾಡ ಅದಿದೇವತೆ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನೆರವೇರಿಸಿದ ಬಳಿಕ ಚಾಮುಂಡಿ ತಾಯಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಭಿನವ ಗವಿಸಿದ್ದೇಶ್ವರ ಶ್ರೀಗಳು ಚಾಲನೆ ನೀಡಿದರು.

. Ad Widget . Ad Widget . Ad Widget

ಬೆಳಗ್ಗೆ 11.50ರಿಂದ 12.13ರ ನಡುವಿನ ಶುಭ ಧನುರ್ ಲಗ್ನದಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಶ್ರೀಗಳು ಚಾಅಲನೆ ನೀಡಿದರು.

. Ad Widget .

ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್​​, ಡಿಸಿಎಂ ಪರಮೇಶ್ವರ್, ಸಚಿವ ಯತೀಂದ್ರ ಸಿದ್ದರಾಮಯ್ಯ, ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ, ನೂರಾರು ಮಠಾಧೀಶರು ಹಾಗೂ ಧರ್ಮಗುರುಗಳು ಭಾಗವಹಿಸಿದ್ದರು.

ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದ್ದು, ಪಾಸ್ ಇದ್ದವರಿಗೆ ಮಾತ್ರ ಉದ್ಘಾಟನಾ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗಿದೆ.

Leave a Comment

Your email address will not be published. Required fields are marked *