ಮತ್ತೆ ಮುಷ್ಕರಕ್ಕೆ ಇಳಿದ 108 ಅಂಬ್ಯುಲೆನ್ಸ್ ಸಿಬ್ಬಂದಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ 108 ಆಂಬುಲೆನ್ಸ್ ನೌಕರರು ಇಂದು ರಾತ್ರಿ 10 ಗಂಟೆಯ ನಂತರ ಸಾಮೂಹಿಕ ರಜೆ ಹಾಕಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. 108 ಆಂಬುಲೆನ್ಸ್ ನೌಕರರ ಸಂಘದ ಅಧ್ಯಕ್ಷರಾದ ಚಂದ್ರಣ್ಣ ಈ ಕುರಿತು ಮಾಹಿತಿ ನೀಡಿದ್ದು, ಸರ್ಕಾರದ ವಿಳಂಬ ನೀತಿಯ ವಿರುದ್ಧ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

. Ad Widget . Ad Widget . Ad Widget

ಒಂದು ವೇಳೆ ನಿಗದಿತ ಗಡುವಿನೊಳಗೆ ಸರ್ಕಾರವು ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದಿದ್ದರೆ, ರಾಜ್ಯಾದ್ಯಂತ ತುರ್ತು ಸೇವೆಗಳಿಗೆ ಭಾರಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯು ತುರ್ತಾಗಿ ಎಚ್ಚೆತ್ತುಕೊಂಡು ನೌಕರರ ಸಂಘದೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಬಗೆಹರಿಸಬೇಕಿದೆ.

. Ad Widget .

Leave a Comment

Your email address will not be published. Required fields are marked *