ಕೊಡಗು: ನಾಲ್ವರು ಅಕ್ರಮ ಬಾಂಗ್ಲಾ ವಲಸಿಗರ ಬಂಧನ

ಸಮಗ್ರ ನ್ಯೂಸ್: ಕಾಫಿ ತೋಟವೊಂದರಲ್ಲಿ ಕಾರ್ಮಿಕರಾಗಿ ತಲೆ ಮರೆಸಿಕೊಂಡಿದ್ದ ಅಕ್ರಮ ಬಾಂಗ್ಲಾ ಪ್ರಜೆಗಳನ್ನು ಕೊಡಗಿನಲ್ಲಿ ಪತ್ತೆ ಹಚ್ಚಲಾಗಿದೆ. ಹಿಂದೂ ಜಾಗರಣಾ ವೇದಿಕೆ ಹಾಗೂ ಆಟೋ ಚಾಲಕರ ಸಂಘದವರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಅವರ ವಿಚಾರಣೆ ನಡೆಸುತ್ತಿದ್ದು, ಬ್ರೋಕರ್‌ ಮೂಲಕ ಭಾರತಕ್ಕೆ ಇವರು ಬಂದಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಬೆಂಗಳೂರು ನೋಂದಣಿಯ ಬೈಕ್‌ ಪತ್ತೆ ಆಗಿದೆ.

. Ad Widget . Ad Widget . Ad Widget

ಈ ಬಗ್ಗೆ ಹೇಳಿಕೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ‘ಪೊನ್ನಂಪೇಟೆ ತಾಲೂಕಿನ ಬಾಳೆಲೆಯಲ್ಲಿ ನಾಲ್ವರು ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ. ಅವರ ವಿರುದ್ಧ ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದಿದ್ದಾರೆ.

. Ad Widget .

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬಾಳೆಲೆ ವ್ಯಾಪ್ತಿಯ ಕೊಟ್ಟಿಗೇರಿ ಗ್ರಾಮದ ತೋಟವೊಂದರಲ್ಲಿ ಕಾರ್ಮಿಕರಾಗಿ ಅಕ್ರಮ ಬಾಂಗ್ಲಾದ ನಾಲ್ವರು ಪ್ರಜೆಗಳು ಕೆಲಸ ಮಾಡುತ್ತಿದ್ದರು. ಅವರನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹಾಗೂ ಆಟೋ ಚಾಲಕರ ಸಂಘದವರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ವಶಕ್ಕೆ ಪಡೆದವರನ್ನು ಸುಜಾನ್ (32), ಸೋನಿಯಾ(28), ಸಂಜಿಧ್(10) ಮತ್ತು ಶಿಯಾಮ (5) ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಪಶ್ಚಿಮ ಬಂಗಾಳದ ಬ್ರೋಕರ್ ಮೂಲಕ ಭಾರತಕ್ಕೆ ಬಂದಿರುವುದಾಗಿ ವಲಸಿಗರೇ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಅವರ ಬಳಿ ಬೆಂಗಳೂರು ನೋಂದಣಿಯ ದ್ವಿಚಕ್ರ ವಾಹನವೂ ಪತ್ತೆಯಾಗಿದೆ.

Leave a Comment

Your email address will not be published. Required fields are marked *