ಸಮಗ್ರ ನ್ಯೂಸ್: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂಬೈ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಒಂದು ದಾಳಿ ಹೊಣೆಯನ್ನು ಬಿಷ್ಣೊಯಿ ಗ್ಯಾಂಗ್ ಹೊತ್ತುಕೊಂಡಿದೆ.
ಸಲ್ಮಾನ್ ಖಾನ್ ಜೊತೆಗೆಗಿನ ಕೆಲಸವೇ ಇದೀಗ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.ಮುಂಬೈನ ಸಾಂತಾಕ್ರೂಜ್ ಪ್ರದೇಶದಲ್ಲಿ ಈ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ಜುಹು ಪ್ರದೇಶದಲ್ಲಿ ಭಾನುವಾರ ಟೈಗರ್ ಶ್ರಾಫ್ ಅವರ ಬಿಎಂಡಬ್ಲ್ಯು ವಾಹನದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಬಳಿಕ ನಗರದಲ್ಲಿ ಭಾರೀ ಆತಂಕ ಸೃಷ್ಟಿಯಾಗಿತ್ತು. ಪ್ರಕರಣದ ಬೆನ್ನುಹತ್ತಿರುವ ತನಿಖಾಧಿಕಾರಿಗಳು ತೀವ್ರ ಶೋಧ ಕಾರ್ಯ ನಡೆಸಿ ಸಾಂತಾಕ್ರೂಜ್ನಲ್ಲಿ ಈ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ನಡೆದ ಸಂದರ್ಭ, ಸ್ಥಳದಲ್ಲಿದ್ದ ಪರಿಸ್ಥಿತಿಗಳು ಮತ್ತು ಕೃತ್ಯದ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆಹಚ್ಚಲು ಆತನ ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.








