ಸೌತಡ್ಕ: ಅಂಗಡಿ ವಿಚಾರದಲ್ಲಿ ಗಲಾಟೆ; ದೂರು ದಾಖಲು

ಸಮಗ್ರ ನ್ಯೂಸ್: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪಕ್ಕದಲ್ಲಿನ ಅಂಗಡಿಯಲ್ಲಿ ನಡೆದ ಗಲಾಟೆ, ಹಲ್ಲೆ ಹಾಗೂ ಸೊತ್ತುಗಳಿಗೆ ಹಾನಿ ಮಾಡಿದ ಆರೋಪಕ್ಕೆ ಸಂಬಂಧಿಸಿ ಎರಡೂ ಕಡೆಯಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

. Ad Widget . Ad Widget . Ad Widget

ಕೊಕ್ಕಡ ನಿವಾಸಿ ಕೃಷ್ಣ ಭಟ್ ನೀಡಿದ ದೂರಿನ ಪ್ರಕಾರ, ಅ. 18ರಂದು ಬೆಳಗ್ಗೆ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಸೇವಾ ಟ್ರಸ್ಟ್‌ಗೆ ಸೇರಿದ ಕಟ್ಟಡದ ಅಂಗಡಿಯಲ್ಲಿ ರಾಘವ ಭಂಡಾರಿ ಮತ್ತು ಅವರ ಕೆಲಸಗಾರರು ವ್ಯಾಪಾರ ಮಾಡುತ್ತಿದ್ದಾಗ, ಈ ಹಿಂದೆ ಅಲ್ಲಿ ವ್ಯಾಪಾರ ನಡೆಸುತ್ತಿದ್ದ ಹರೀಶ್, ಅವರ ಪತ್ನಿ, ಮಕ್ಕಳು ಹಾಗೂ ಇತರರು ಅಂಗಡಿಗೆ ಪ್ರವೇಶಿಸಿ ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ.

. Ad Widget .

ಈ ವೇಳೆ ಕಟ್ಟಡ ಹಾಗೂ ಸೊತ್ತುಗಳಿಗೆ ಸುಮಾರು 25,000 ರೂ. ನಷ್ಟು ಹಾನಿ ಆಗಿದೆ. ತಂಡ ರಾಘವ ಭಂಡಾರಿ ಮತ್ತು ಅವರ ಕೆಲಸಗಾರರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಘಟನೆಗೆ ಸಂಬಂಧಿಸಿ ಹರಿಶ್ಚಂದ್ರ ಅವರ ಪತ್ನಿ ನೀಡಿದ ದೂರಿನಂತೆ ಮತ್ತೊಂದು ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *