ಉಪ್ಪಿನಂಗಡಿ: ಬಾರ್ ಸಮೀಪ ತಲವಾರು ಪ್ರದರ್ಶನ; ಇಬ್ಬರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಬಾರ್‌ ಸಮೀಪ ನಡೆದ ಮಾತಿನ ಚಕಮಕಿ ಗಲಾಟೆಗೆ ತಿರುಗಿದ್ದು, ಈ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

. Ad Widget . Ad Widget . Ad Widget

ಅ.18ರಂದು ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶೆಣೈ ರಸ್ತೆಯಲ್ಲಿರುವ ಬಾರ್‌ ಸಮೀಪ ಮಂಜುನಾಥ್, ವಿಶ್ವನಾಥ ಹಾಗೂ ಮತ್ತೋರ್ವ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಗಲಾಟೆ ಸಂಭವಿಸಿದೆ ಎನ್ನಲಾಗಿದೆ. ಈ ವೇಳೆ ಮಂಜುನಾಥ್ ಎಂಬಾತ ತನ್ನ ಬಳಿಯಿದ್ದ ತಲವಾರನ್ನು ಸಾರ್ವಜನಿಕವಾಗಿ ಪ್ರದರ್ಶಿಸಿ ಭೀತಿ ಉಂಟುಮಾಡಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

. Ad Widget .

ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಮಂಜುನಾಥ್ ಹಾಗೂ ವಿಶ್ವನಾಥನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

Leave a Comment

Your email address will not be published. Required fields are marked *