ವಾಯುಭಾರ ಕುಸಿತ ಹಿನ್ನಲೆ|ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಇತ್ತೀಚೆಗೆ ತಗ್ಗಿದ್ದ ಹಿಂಗಾರು ಮಳೆಯು ವಾರಾಂತ್ಯದ ವೇಳೆಗೆ ಮತ್ತೆ ಬಿರುಸುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

. Ad Widget . Ad Widget . Ad Widget

ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಅಕ್ಟೋಬರ್ 23ರಿಂದ ಅಕ್ಟೋಬರ್ 25ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಹಾಸನ ಜಿಲ್ಲೆಯಲ್ಲಿ ಅಕ್ಟೋಬರ್ 23ರಿಂದ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇದಲ್ಲದೆ, ಮಂಡ್ಯದಲ್ಲಿ ಅಕ್ಟೋಬರ್ 25ರಂದು, ಕೋಲಾರದಲ್ಲಿ ಅಕ್ಟೋಬರ್ 26ರಂದು ಹಾಗೂ ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 22ರಂದು ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ.

. Ad Widget .

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ. ಆದರೆ, ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ಮತ್ತಷ್ಟು ತೀವ್ರಗೊಂಡು ಅಕ್ಟೋಬರ್ 24 ಅಥವಾ 25ರ ವೇಳೆಗೆ ಸೈಕ್ಲೋನ್ ಆಗಿ ರೂಪಗೊಳ್ಳುವ ಸಂಭವವಿದೆ ಎಂದು ಹಿರಿಯ ಹವಾಮಾನ ತಜ್ಞ ಶ್ರೀನಿವಾಸರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *