ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಶರಣಾಗತಿ ಬೆನ್ನಲ್ಲೆ ಡಿಸಿಎಂ ಪರಮೇಶ್ವರ್ ಮಾಹಿತಿ

ಸಮಗ್ರ ನ್ಯೂಸ್: ಮಾಜಿ ಸಿದ್ದರಾಮಯ್ಯರನ್ನು ಸಂಬಂಧಿಸಿದ್ದು ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಶರಣಾಗತಿ ಬೆನ್ನಲ್ಲೆ ರಾಜ್ಯದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಸ್ಟಿಂಗ್ ಪ್ರಕರಣ, ಹೈಕಮಾಂಡ್ ಮಧ್ಯಪ್ರವೇಶ, ಮುಜುಗರ ಹಾಗೂ ರಾಜಕೀಯ ಪರಿಸ್ಥಿತಿ ಕುರಿತು ಮಾತನಾಡಿದ್ದಾರೆ.

. Ad Widget . Ad Widget . Ad Widget

ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಪ್ರಕರಣದಿಂದ ಸರ್ಕಾರ ಮತ್ತು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಮಧ್ಯಪ್ರವೇಶಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಇದಕ್ಕೆ ಉತ್ತರಿಸಿದ ಡಿಸಿಎಂ, ಈ ವಿಚಾರದಲ್ಲಿ ತಕ್ಷಣವೇ ಹೈಕಮಾಂಡ್ ಮಧ್ಯಪ್ರವೇಶಿಸಬೇಕೆಂದು ಹೇಳುವ ಅಗತ್ಯವಿಲ್ಲ. ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷರು ಕುಳಿತು ಚರ್ಚಿಸಿ, ಸರ್ಕಾರ ಅಥವಾ ಪಕ್ಷಕ್ಕೆ ಮುಜುಗರವಾಗದ ರೀತಿಯಲ್ಲಿ ಸ್ಥಳೀಯವಾಗಿಯೇ ಸಮಸ್ಯೆ ಬಗೆಹರಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

. Ad Widget .

ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿಗಳೂ ಇದ್ದಾರೆ. ಪ್ರತಿಯೊಂದು ವಿಚಾರಕ್ಕೂ ಹೈಕಮಾಂಡ್ ಮಧ್ಯಪ್ರವೇಶವನ್ನು ನಿರೀಕ್ಷಿಸುತ್ತಾ ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಹಿರಿಯ ನಾಯಕರ ತಂಡವನ್ನು ಕಳುಹಿಸಲಾಗುತ್ತದೆ ಎಂಬ ಚರ್ಚೆಗಳ ಕುರಿತು ಕೇಳಿದ ಪ್ರಶ್ನೆಗೆ, ಆ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಹೇಳಿದರು.

ಸ್ಟಿಂಗ್ ಪ್ರಕರಣದ ವಿಚಾರವಾಗಿ ಸರ್ಕಾರದ ಕೆಲಸ ಕಾರ್ಯಗಳಿಗಿಂತ ವಿವಾದಗಳೇ ಹೆಚ್ಚು ಮುನ್ನೆಲೆಗೆ ಬರುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದು ದುರದೃಷ್ಟಕರ. ಸರ್ಕಾರ ಆಡಳಿತ ನಡೆಸುತ್ತಿದ್ದರೆ, ವಿರೋಧ ಪಕ್ಷವು ತನ್ನ ಜವಾಬ್ದಾರಿ ನಿರ್ವಹಿಸುತ್ತಿದೆ. ಆದರೆ, ಒಂದೇ ವಿಚಾರವನ್ನು ಪ್ರಮುಖವಾಗಿ ಚರ್ಚಿಸುತ್ತಾ ಕುಳಿತರೆ ಜನರ ಸಮಸ್ಯೆಗಳು ಮತ್ತು ಸರ್ಕಾರದ ಅಭಿವೃದ್ಧಿ ಕಾರ್ಯಗಳು ಹಿನ್ನೆಲೆಗೆ ಸರಿಯುತ್ತವೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಕರಣದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಆದರೆ, ಪ್ರತಿದಿನ ಪತ್ರಿಕೆಗಳು ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಇದೇ ವಿಚಾರವನ್ನು ಜನರು ನೋಡುತ್ತಿದ್ದರೆ ಅವರಿಗೆ ಬೇಸರವಾಗುವುದಿಲ್ಲವೇ? ಜನರ ನಿರೀಕ್ಷೆ ಏನು ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಸರ್ಕಾರದ ಕೆಲಸಗಳು, ಜನರ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಚರ್ಚೆಯಾಗಬೇಕು ಎಂದರು.

Leave a Comment

Your email address will not be published. Required fields are marked *