ನ.1: ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ

ಸಮಗ್ರ ನ್ಯೂಸ್: ಈ ವರ್ಷ ನವೆಂಬರ್ 1ರಂದು ಭಾನುವಾರವಾಗಿದ್ದರೂ, ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಕಡ್ಡಾಯವಾಗಿ ಆಚರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ.

. Ad Widget . Ad Widget . Ad Widget

ಈ ಸಂಬಂಧ ಅಕ್ಟೋಬರ್ 15ರಂದು ಸುತ್ತೋಲೆ ಹೊರಡಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರ ಕಚೇರಿ, ರಾಜ್ಯದಾದ್ಯಂತ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಸೇರಿದಂತೆ ರಾಷ್ಟ್ರೀಯ ಹಾಗೂ ರಾಜ್ಯ ಹಬ್ಬಗಳನ್ನು ನಿಗದಿತ ದಿನದಂದೇ ಗೌರವಯುತವಾಗಿ ಆಚರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

. Ad Widget .

ರಜಾದಿನವಾಗಿರುವ ಕಾರಣಕ್ಕೆ ರಾಜ್ಯ ಹಬ್ಬಗಳ ಆಚರಣೆಯನ್ನು ಮುಂದೂಡುವಂತಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಹೀಗಾಗಿ ನವೆಂಬರ್ 1ರಂದು ಭಾನುವಾರವಾದರೂ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆಯ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕನ್ನಡ ಭಾಷೆ, ನಾಡು-ನುಡಿ, ಸಂಸ್ಕೃತಿ ಮತ್ತು ಪರಂಪರೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ರಾಜ್ಯೋತ್ಸವವನ್ನು ಗೌರವಯುತವಾಗಿ ಆಚರಿಸುವಂತೆ ಇಲಾಖೆ ಸೂಚಿಸಿದೆ. ರಜಾದಿನದ ನೆಪದಲ್ಲಿ ಆಚರಣೆಯಿಂದ ಹಿಂದೆ ಸರಿಯದೆ, ಕನ್ನಡದ ಅಭಿಮಾನವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ನಿಟ್ಟಿನಲ್ಲಿ ಶಾಲೆಗಳು ಕ್ರಮ ಕೈಗೊಳ್ಳಬೇಕಿದೆ.

Leave a Comment

Your email address will not be published. Required fields are marked *