ನಂದಿನಿ ಹಾಲಿನ ದರ ₹8 ಹೆಚ್ಚಳ| ನ.1ರಿಂದ ಪರಿಷ್ಕೃತ ದರ ಜಾರಿ

ಸಮಗ್ರ ನ್ಯೂಸ್: ಕೆಎಂಎಫ್‌ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ಅನ್ವಯವಾಗುವಂತೆ 8 ರೂಪಾಯಿ ಹೆಚ್ಚಳ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ನವೆಂಬರ್ 1 ರಿಂದ ಜಾರಿಗೆ ಬರಲಿದೆ.ಈ ಬಗ್ಗೆ ಗುರುವಾರ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

. Ad Widget . Ad Widget . Ad Widget

ಹಾಲಿನ ದರ ಹೆಚ್ಚಳಕ್ಕೆ ಹಲವು ತಿಂಗಳುಗಳಿಂದ ಹಾಲು ನಿಗಮ ಮಂಡಳಿಗಳು ಸರ್ಕಾರಕ್ಕೆ ಒತ್ತಾಯಿಸಿದ್ದವು. ಕೆಎಂಎಫ್‌ ಕೂಡ ಸರ್ಕಾರಕ್ಕೆ ಕಳೆದ ತಿಂಗಳೇ ಪ್ರಸ್ತಾವನೆ ಸಲ್ಲಿಸಿತ್ತು. ಸದ್ಯ ಸರ್ಕಾರ ದರ ಏರಿಕೆಗೆ ಸಮ್ಮತಿ ಸೂಚಿಸಿದೆ.

. Ad Widget .

ದರ ಏರಿಕೆಯ 8 ರೂಪಾಯಿಯಲ್ಲಿ 7 ರೂಪಾಯಿಯನ್ನು ರೈತರಿಗೆ ಸಹಾಯಧನವಾಗಿ ನೀಡಲು ನಿರ್ಧರಿಸಲಾಗಿದೆ. ರೈತರಿಗೆ ಬಮುಲ್ ವ್ಯಾಪ್ತಿಯಲ್ಲಿ ಸದ್ಯ ಪ್ರತಿ ಲೀಟರ್‌ಗೆ 33 ರೂ. ದಿಂದ 35 ರೂ. ನೀಡಲಾಗುತ್ತಿದ್ದು, ಆ ಮೊತ್ತ 40 ರಿಂದ 42 ರೂಪಾಯಿಗೆ ಹೆಚ್ಚಳವಾಗಲಿದೆ. ಹೆಚ್ಚುವರಿ 1 ರೂಪಾಯಿಯನ್ನು ಹಾಲು ಮಂಡಳಿಗಳ ಪಾಲಾಗಿದೆ.

Leave a Comment

Your email address will not be published. Required fields are marked *