ಸಮಗ್ರ ನ್ಯೂಸ್: ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿರುವ ಗ್ರಾಹಕರಿಗೆ ಶುಕ್ರವಾರ ಸಿಹಿಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಅಕ್ಟೋಬರ್ 30ರಂದು ಗಮನಾರ್ಹ ಇಳಿಕೆಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ಒಂದೇ ದಿನ 1,690 ರೂಪಾಯಿ ಕುಸಿದಿದ್ದು, 1,42,260 ರೂಪಾಯಿಗೆ ತಲುಪಿದೆ.
ಇದೇ ವೇಳೆ ಬೆಳ್ಳಿ ದರದಲ್ಲಿಯೂ ಭಾರಿ ಇಳಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ. ಬೆಳ್ಳಿ ಬೆಲೆ 5,000 ರೂಪಾಯಿ ಕಡಿಮೆಯಾಗಿದೆ.
ಅಕ್ಟೋಬರ್ 30, 2026ರ ಶುಕ್ರವಾರದ ಗುಡ್ರಿಟರ್ನ್ಸ್ ದರಪಟ್ಟಿಯ ಪ್ರಕಾರ, 24 ಕ್ಯಾರೆಟ್ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 169 ರೂಪಾಯಿ ಇಳಿಕೆಯಾಗಿದೆ. ಇದರೊಂದಿಗೆ ಒಂದು ಗ್ರಾಂ ಅಪರಂಜಿ ಚಿನ್ನದ ಬೆಲೆ 14,226 ರೂಪಾಯಿಗೆ ತಲುಪಿದೆ. ಅದೇ ರೀತಿ 10 ಗ್ರಾಂ ಚಿನ್ನದ ಬೆಲೆ 1,690 ರೂಪಾಯಿ ಕಡಿಮೆಯಾಗಿ 1,42,260 ರೂಪಾಯಿಯಾಗಿದೆ.
ಆಭರಣ ತಯಾರಿಕೆಗೆ ಹೆಚ್ಚಾಗಿ ಬಳಸುವ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿಯೂ ಇಳಿಕೆ ಕಂಡುಬಂದಿದೆ. ಒಂದು ಗ್ರಾಂ ಚಿನ್ನದ ದರ 155 ರೂಪಾಯಿ ಕುಸಿದು 13,040 ರೂಪಾಯಿಗೆ ತಲುಪಿದೆ. 10 ಗ್ರಾಂ ಚಿನ್ನದ ಬೆಲೆಯಲ್ಲಿ 1,550 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ 1,30,400 ರೂಪಾಯಿಗೆ ಮಾರಾಟವಾಗುತ್ತಿದೆ.









