ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬಿಸಿ|ನ.5 ರಿಂದ ಬಸ್ ಪ್ರಯಾಣದರ ಹೆಚ್ಚಳ

ಸಮಗ್ರ ನ್ಯೂಸ್:: ರಾಜ್ಯದಲ್ಲಿ ಸರ್ಕಾರಿ ಬಸ್‌ (KSRTC) ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ ತಟ್ಟಲಿದ್ದು, ನವೆಂಬರ್ 5 ರಿಂದ ಬಸ್‌ ಟಿಕೆಟ್ ದರ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

. Ad Widget . Ad Widget . Ad Widget

ಚಿಕ್ಕಬಳ್ಳಾಪುರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಳೆದ ಒಂದು ವರ್ಷದ ಅವಧಿಯಲ್ಲಿ ಡೀಸೆಲ್ ದರವನ್ನು 5 ಬಾರಿ ಹೆಚ್ಚಿಸಿರುವುದೇ ಈ ನಿರ್ಧಾರಕ್ಕೆ ಮುಖ್ಯ ಕಾರಣ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

. Ad Widget .

ಇಂಧನ ಬೆಲೆ ಏರಿಕೆಯಿಂದಾಗಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ವಾರ್ಷಿಕ ಸುಮಾರು ₹ 2,000 ಕೋಟಿಯಷ್ಟು ಹೆಚ್ಚುವರಿ ನಷ್ಟ ಉಂಟಾಗುತ್ತಿದೆ. ಪ್ರಸ್ತುತ ಸಾರಿಗೆ ಸಂಸ್ಥೆಗಳು ಒಟ್ಟಾರೆಯಾಗಿ ₹ 9,000 ಕೋಟಿಯಷ್ಟು ಬೃಹತ್ ಸಾಲ ಮತ್ತು ನಷ್ಟದ ಸುಳಿಯಲ್ಲಿ ಸಿಲುಕಿದ್ದು, ಟಿಕೆಟ್ ದರ ಏರಿಸುವುದು ಅನಿವಾರ್ಯವಾಗಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *