ಮುರುಸು ಚಂಡಮಾರುತ ಎಫೆಕ್ಟ್| ರಾಜ್ಯಾದ್ಯಂತ ಮತ್ತೆ ಮೂರು ದಿನ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಮುರಸು ಚಂಡಮಾರುತದ ಪ್ರಭಾವದಿಂದ ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 2ರಿಂದ 6ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

. Ad Widget . Ad Widget . Ad Widget

ಚಂಡಮಾರುತವು ಚೆನ್ನೈ ಮತ್ತು ಓಂಗೋಲ್‌ನಿಂದ ಕೆಲವೇ ಕಿಲೋಮೀಟರ್ ದೂರದಲ್ಲಿದ್ದು, ನವೆಂಬರ್ 2ರ ಮಧ್ಯರಾತ್ರಿ ವೇಳೆಗೆ ಆಂಧ್ರಪ್ರದೇಶದ ನರಸಾಪುರ ಮತ್ತು ನೆಲ್ಲೂರು ನಡುವೆ ಭೂಸ್ಪರ್ಶ ಮಾಡುವ ಸಾಧ್ಯತೆಯಿದೆ. ಭೂಸ್ಪರ್ಶದ ಸಂದರ್ಭದಲ್ಲಿ ಗಂಟೆಗೆ 150 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

. Ad Widget .

ಆಂಧ್ರಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಆದರೆ ಕರ್ನಾಟಕದಲ್ಲಿ ಆಂಧ್ರಪ್ರದೇಶದಷ್ಟು ತೀವ್ರ ಪ್ರಮಾಣದ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಸಿ.ಎಸ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ನವೆಂಬರ್ 2ರಂದು ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 3, 4 ಮತ್ತು 5ರಂದು ರಾಜ್ಯದಾದ್ಯಂತ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Leave a Comment

Your email address will not be published. Required fields are marked *