ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್| ಬಸ್ ಪ್ರಯಾಣ ದರದಲ್ಲಿ ಭಾರೀ ಏರಿಕೆ

ಸಮಗ್ರ ನ್ಯೂಸ್: ಹಾಲಿನ ದರ ಏರಿಕೆಯ ಬೆನ್ನಲ್ಲೇ ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದೆ. ರಾಜ್ಯದಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಲಾಗಿದ್ದು, ಕೆಎಸ್‌ಆರ್‌ಟಿಸಿ ಬಸ್‌ಗಳ ಪ್ರಯಾಣ ದರ ಗರಿಷ್ಠ ₹9ರಷ್ಟು ಏರಿಕೆಯಾಗಿದೆ. ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರದಲ್ಲೂ ಹೆಚ್ಚಳ ಮಾಡಲಾಗಿದೆ.

. Ad Widget . Ad Widget . Ad Widget

ಬಿಎಂಟಿಸಿ ಸಾಮಾನ್ಯ ಬಸ್‌ಗಳ ಟಿಕೆಟ್ ದರವನ್ನೂ ಹೆಚ್ಚಿಸಲಾಗಿದೆ. ಈ ಹಿಂದೆ ಪ್ರತಿ ಸ್ಟೇಜ್‌ಗೆ ₹6 ಇದ್ದ ಕನಿಷ್ಠ ಟಿಕೆಟ್ ದರವನ್ನು ₹10ಕ್ಕೆ ಏರಿಕೆ ಮಾಡಲಾಗಿದೆ. ವಾಯುವಜ್ರ ಬಸ್‌ಗಳ ಕೊನೆಯ ಹಂತದ ಪ್ರಯಾಣ ದರವನ್ನು ₹75ರಿಂದ ₹90ಕ್ಕೆ ಹೆಚ್ಚಿಸಲಾಗಿದೆ.

. Ad Widget .

ರಾಜ್ಯದಲ್ಲಿ ಡೀಸೆಲ್ ಬೆಲೆ ಹಾಗೂ ಸಿಬ್ಬಂದಿ ವೆಚ್ಚ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣ ದರ ಪರಿಷ್ಕರಣೆಗೆ ನಾಲ್ಕು ಸಾರಿಗೆ ನಿಗಮಗಳಿಗೆ ಸರ್ಕಾರ ಈ ಹಿಂದೆಯೇ ಅವಕಾಶ ನೀಡಿತ್ತು. ಕಳೆದ 10 ವರ್ಷಗಳಲ್ಲಿ ಒಂದೇ ಬಾರಿ ಬಸ್ ಪ್ರಯಾಣ ದರ ಹೆಚ್ಚಳ ಮಾಡಲಾಗಿದೆ. ಆದರೆ ವಿರೋಧ ಪಕ್ಷಗಳು ಈ ವಿಚಾರದಲ್ಲಿ ಸುಳ್ಳು ಆರೋಪ ಮಾಡುತ್ತಿವೆ ಎಂದು ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದರು.

2021ರಲ್ಲಿ ಎಂ.ಆರ್. ಶ್ರೀನಿವಾಸ ಮೂರ್ತಿ ನೇತೃತ್ವದಲ್ಲಿ ಆರ್ಥಿಕ ಸ್ವಾವಲಂಬನೆ ಹಾಗೂ ಸಂಪನ್ಮೂಲ ಕ್ರೋಡೀಕರಣದ ಕುರಿತು ಅಧ್ಯಯನ ನಡೆಸಲು ಸಮಿತಿ ರಚಿಸಲಾಗಿತ್ತು. ಈ ಸಮಿತಿಯು ಪ್ರಯಾಣ ದರ ಹೆಚ್ಚಳ ಸೇರಿದಂತೆ ಹಲವು ಶಿಫಾರಸುಗಳನ್ನು ಮಾಡಿತ್ತು. ಆದರೆ ಸಾರಿಗೆ ನಿಗಮಗಳಲ್ಲಿ ಈ ಬಗ್ಗೆ ನಿರ್ಧಾರ ಕೈಗೊಂಡಿರಲಿಲ್ಲ. ನಂತರ 2026ರಲ್ಲಿ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿಯನ್ನು ಅತುಲ್ ಕುಮಾರ್ ತಿವಾರಿ ನೇತೃತ್ವದಲ್ಲಿ ರಚಿಸಲಾಗಿತ್ತು.

ಬುಧವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ಸಚಿವ ಬೈರತಿ ಸುರೇಶ್ ಅವರು, ಪ್ರಯಾಣ ದರ ಏರಿಕೆ ಕುರಿತು ವಿವರಗಳನ್ನು ನೀಡಿದ್ದಾರೆ.

Leave a Comment

Your email address will not be published. Required fields are marked *