ಸಮಗ್ರ ನ್ಯೂಸ್: : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ನವೆಂಬರ್ 4 ಮತ್ತು 5ರಂದು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಕರಾವಳಿ ಕರ್ನಾಟಕದಲ್ಲೂ ನವೆಂಬರ್ 5ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ನವೆಂಬರ್ 4ರಂದು ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ಇದೆ.
ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿಯೂ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ನವೆಂಬರ್ 4 ಮತ್ತು 5ರಂದು ಭಾರಿ ಮಳೆಯಾಗುವ ಮುನ್ಸೂಚನೆಯಿದೆ.









