ಸಮಗ್ರ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಹಬ್ಬಕ್ಕೆ ಬಂಪರ್ ಗುಡ್ ನ್ಯೂಸ್ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯ 34, 35 ಮತ್ತು 36ನೇ ಕಂತುಗಳನ್ನು ಸರ್ಕಾರ ಒಟ್ಟಿಗೆ ಬಿಡುಗಡೆ ಮಾಡಲಿದೆ. ಇದಕ್ಕಾಗಿ ಒಟ್ಟು ₹7,405.86 ಕೋಟಿ ಹಣವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಮ್ಮೆಲೆ ಬಿಡುಗಡೆ ಮಾಡಲಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.
ಸರ್ಕಾರದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಪ್ರತಿ ತಿಂಗಳು ರಾಜ್ಯದ ಪ್ರತಿ ಮನೆಯ ಮಹಿಳೆಯರ ಅಕೌಂಟ್ಗೆ 2000 ರೂಪಾಯಿ ಜಮೆ ಮಾಡಲಾಗ್ತಿದೆ. ಗೃಹಲಕ್ಷ್ಮಿ ಮರುಪರಿಶೀಲನೆ ಘೋಷಣೆ ಬಳಿಕ ಗೃಹಲಕ್ಷ್ಮಿ ಹಣ ಬರುತ್ತೋ ಇಲ್ವೋ ಅನ್ನೋ ಗೊಂದಲ ಮಹಿಳೆಯರಲ್ಲಿ ಮನೆ ಮಾಡಿತ್ತು. ಇದೀಗ ಮೂರು ಕಂತಿನ ಹಣವನ್ನ ಒಟ್ಟಿಗೆ ನೀಡಲು ಸರ್ಕಾರ ಮುಂದಾಗಿದೆ.
ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ 33 ಕಂತುಗಳ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಇದೀಗ 34ನೇ ಕಂತಿನ 2,500 ಕೋಟಿ ರೂ, 35ನೇ ಕಂತಿನ 2,452.93 ಕೋಟಿ ರೂ ಹಾಗೂ 36ನೇ ಕಂತಿನ 2,452.93 ಕೋಟಿ ರೂ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲು ಡಿಕೆ ಶಿವಕುಮಾರ್ ಆದೇಶ ಮಾಡಿದ್ದಾರೆ









