ಪಿಲಿಕುಳ ಪಾರ್ಕ್ ಶೀಘ್ರದಲ್ಲೇ ಮೃಗಾಲಯ ಪ್ರಾಧಿಕಾರಕ್ಕೆ ಹಸ್ತಾಂತರ – ರಾಮಲಿಂಗಾರೆಡ್ಡಿ

ಸಮಗ್ರ ನ್ಯೂಸ್: ಪಿಲಿಕುಳ ನಿಸರ್ಗಧಾಮವನ್ನು ಕರ್ನಾಟಕ ಮೃಗಾಲಯ ಪ್ರಾಧಿಕಾರಕ್ಕೆ ಹಸ್ತಾಂತರಿಸುವ ಕಾರ್ಯ ಅಂತಿಮ ಘಟ್ಟದಲ್ಲಿದ್ದು ಶೀಘ್ರದಲ್ಲೇ ಒಪ್ಪಂದ ‍ಪತ್ರಕ್ಕೆ ಸಹಿಹಾಕಲಾಗುವುದು ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

. Ad Widget . Ad Widget . Ad Widget

ಪಿಲಿಕುಳ ನಿಸರ್ಗಧಾಮ, ಬೆಂಗರೆಯ ಏರೊಡೈನಾಮಿಕ್ ನೆಡುತೋಪಿಗೆ ಭೇಟಿ ನೀಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪಿಲಿಕುಳ ನಿಸರ್ಗಧಾಮದ ಅಭಿವೃದ್ಧಿಗಾಗಿ ನೀಡಿದ್ದ ಭೂಮಿಯನ್ನು ವಾಪಸ್ ಪಡೆಯಲು ಸರ್ಕಾರ ಆದೇಶ ನೀಡಿದ್ದು, ಅದನ್ನು ಎಲೆಕ್ಟ್ರಾನಿಕ್ಸ್‌, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ-ತಂತ್ರಜ್ಞಾನ ಇಲಾಖೆಗೆ ನಿಡಲಾಗುವುದು ಎಂದರು.

. Ad Widget .

ನಗರ ಪರಿಸರ ಪಾರ್ಕ್‌ಗೆ ಸಂಬಂಧಿಸಿದ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು. ಇದಕ್ಕೆ ಬೇಕಾದ ಹಣಕಾಸಿನ ನೆರವನ್ನು ಬಿಡುಗಡೆ ಮಾಡಲು ರಮಾನಾಥ ರೈ ಅರಣ್ಯ ಸಚಿವರಾಗಿದ್ದಾಗ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮುಂದಾಗಿತ್ತು. ಮಂಡಳಿ ಅಧ್ಯಕ್ಷರ ಜೊತೆ ಮಾತನಾಡಿ ಅನುದಾನ ಬಿಡುಗಡೆಗೆ ಸೂಚಿಸಲಾಗುವುದು ಎಂದು ತಿಳಿಸಿದರು

Leave a Comment

Your email address will not be published. Required fields are marked *