ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಬೈಕ್‌ ನಡುವೆ ಢಿಕ್ಕಿ| ಸವಾರ ಸ್ಥಳದಲ್ಲೇ ಸಾವು

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿಯ ವಳಾಲು ಸಮೀಪದ ಗೋಳಿತೊಟ್ಟು ಎಂಬಲ್ಲಿ ನಡೆದಿದೆ.

Ad Widget ... ..

ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ಸಮೀಪದ ಕುಂಟಲ್ಪಾಡಿ ಪದವು ನಿವಾಸಿ ಸಚಿನ್(29) ಎಂದು ತಿಳಿದು ಬಂದಿದೆ. ಉಪ್ಪಿನಂಗಡಿಯಿಂದ ನೆಲ್ಯಾಡಿಗೆ ಹೊರಟಿದ್ದ ಬೈಕ್ ಮತ್ತು ಮಂಗಳೂರಿಗೆ ಬರುತ್ತಿದ್ದ ಮೀನಿನ ಲಾರಿ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆಯ ಮೇಲೆ ಲಾರಿ ಹರಿದಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Ad Widget

ಸಹಸವಾರ ಗಂಭೀರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

Leave a Comment

Your email address will not be published. Required fields are marked *