Ad Widget .

ಬೆಂಗಳೂರಿನ ಗುಂಡಿಗಳಿಗೆ ಪೂಜೆ ನೆರವೇರಿಸಿ ಎಎಪಿ ಪ್ರತಿಭಟನೆ| ರಸ್ತೆ ಅಭಿವೃದ್ಧಿ ಕುರಿತು ಶ್ವೇತಪತ್ರ ಹೊರಡಿಸಲು ಆಗ್ರಹ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು : ರಸ್ತೆಗಳಲ್ಲಿರುವ ಗುಂಡಿಯ ಸುತ್ತ ರಂಗೋಲಿ ಹಾಕಿ, ಹೂವಿನಿಂದ ಅಲಂಕರಿಸಿ, ಆರತಿ ಎತ್ತಿ ಪೂಜೆ. ಅದರ ಸುತ್ತಮುತ್ತ ಸರ್ಕಾರದ ವಿರುದ್ಧ ಬರಹಗಳಿರುವ ಬೋರ್ಡ್‌ ಹಿಡಿದು ನಿಂತಿರುವ ಬಿಳಿ ಟೋಪಿಧಾರಿಗಳು. ಅವರ ಬಾಯಲ್ಲಿ ಭ್ರಷ್ಟಾಚಾರದ ವಿರುದ್ಧ ಆಕ್ರೋಶದ ಘೋಷಣೆಗಳು.

Ad Widget . Ad Widget . Ad Widget .

ಇದು ಆಮ್‌ ಆದ್ಮಿ ಪಾರ್ಟಿಯು ಬುಧವಾರ ಬೆಂಗಳೂರಿನಾದ್ಯಂತ ಹಮ್ಮಿಕೊಂಡಿದ್ದ ರಸ್ತೆಗುಂಡಿ ಹಬ್ಬ ಕಾರ್ಯಕ್ರಮದಲ್ಲಿ ಕಂಡುಬಂದ ದೃಶ್ಯ. ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹಾಗೂ ಬೆಂಗಳೂರು ನಗರದ ಅಧ್ಯಕ್ಷ ಮೋಹನ್‌ ದಾಸರಿ ನೇತೃತ್ವದಲ್ಲಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ವಿನೂತನ ಪ್ರತಿಭಟನೆ ಯಶಸ್ವಿಯಾಯಿತು.

ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಎಎಪಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, “ಬೆಂಗಳೂರಿನ ರಸ್ತೆಗಳ ದುರಸ್ತಿಗೆ ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 20,060 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಖರ್ಚು ಮಾಡಿದೆ. ಆದರೆ ಇಲ್ಲಿನ ರಸ್ತೆಗಳು ಮಾತ್ರ ಶೋಚನೀಯ ಸ್ಥಿತಿಯಲ್ಲಿವೆ. ಗುಂಡಿಗಳಿಂದಾಗಿ ಅಪಘಾತಗಳು, ಸಾವುಗಳು ಸಾಮಾನ್ಯವಾಗಿದೆ. ಸರ್ಕಾರ ಬಿಡುಗಡೆ ಮಾಡಿದ ಹಣವು ಯಾರ ಜೇಬು ಸೇರಿದೆ ಎಂಬ ಬಗ್ಗೆ ಸಮಗ್ರ ತನಿಖೆಯಾಗಬೇಕು. ರಸ್ತೆ ಅಭಿವೃದ್ಧಿ ಯೋಜನೆಗಳ ಅನುದಾನದ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಬೇಕು” ಎಂದು ಆಗ್ರಹಿಸಿದರು.

Leave a Comment

Your email address will not be published. Required fields are marked *