Ad Widget .

100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ – ಸಿದ್ದರಾಮಯ್ಯ ಟೀಕೆ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು: 139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ. ಯಾವ ಸಾಧನೆಗೆ ಸಂಭ್ರಮಾಚರಣೆ? ಗುರಿ ತಲುಪಲು ಪ್ರತಿದಿನ 1.51 ಕೋಟಿ ಲಸಿಕೆ ನೀಡಬೇಕಾಗಿದೆ ಇದಕ್ಕಾಗಿ ಬೇಕಾಗಿರುವುದು ಸಿದ್ದತೆ, ಖಾಲಿ ತಟ್ಟೆಯ ಪ್ರಚಾರ ಅಲ್ಲ ಎಂದು ಹೇಳಿ ಮಾಜಿ ಸಿಎಂ ಸಿದ್ದರಾಮಯ್ಯ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ.

Ad Widget . Ad Widget . Ad Widget .

100 ಕೋಟಿ ಲಸಿಕೆ ವಿತರಿಸಿದ ಹಿನ್ನೆಲೆಯಲ್ಲಿ ಕೇದ್ರ ಸರ್ಕಾರ ಸಂಭ್ರಮಾಚಾರಣೆಗೆ ಮುಂದಾದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಲವು ಪ್ರಶ್ನೆಗಳನ್ನು ಎತ್ತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೇನು?
ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ ನೀಡಿರುವ ನರೇಂದ್ರ ಮೋದಿ ಸರ್ಕಾರ, ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದವಾಗಿದೆ.

ದೇಶದಲ್ಲಿ ಇಲ್ಲಿಯ ವರೆಗೆ 29 ಕೋಟಿ ಜನರಿಗೆ ಎರಡು ಡೋಸ್ ಮತ್ತು 42 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಮಾತ್ರ ನೀಡಲಾಗಿದೆ. 139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ. ಯಾವ ಸಾಧನೆಗೆ ಸಂಭ್ರಮಾಚರಣೆ? ಎಂದು ಪ್ರಶ್ನಿಸಿದ್ದಾರೆ.

ಘೋಷಿತ ಗುರಿಯಂತೆ ದೇಶದ 103 ಕೋಟಿ ವಯಸ್ಕರಿಗೆ ಡಿಸೆಂಬರ್ 31ರೊಳಗೆ 2 ಡೋಸ್ ನೀಡಲು 206 ಕೋಟಿ ಲಸಿಕೆ ಬೇಕಾಗಿದೆ. ಕೊಟ್ಟಿರುವುದು 100 ಕೋಟಿ ಮಾತ್ರ. ಗುರಿ ತಲುಪಲು ಪ್ರತಿದಿನ 1.51 ಕೋಟಿ ಲಸಿಕೆ ನೀಡಬೇಕಾಗಿದೆ ಇದಕ್ಕಾಗಿ ಬೇಕಾಗಿರುವುದು ಸಿದ್ದತೆ, ಖಾಲಿ ತಟ್ಟೆಯ ಪ್ರಚಾರ ಅಲ್ಲ.
ಅಮೆರಿಕ 56%, ಚೀನಾ 70% ಜನಸಂಖ್ಯೆಗೆ ಎರಡು ಡೋಸ್ ಕೊರೊನಾ ಲಸಿಕೆ ನೀಡಿ ಬೂಸ್ಟರ್ ಲಸಿಕೆ ನೀಡುವ ಸಿದ್ದತೆಯಲ್ಲಿದೆ. ಭಾರತದಲ್ಲಿ ಕೇವಲ 21% ಜನಸಂಖ್ಯೆಗೆ ಮಾತ್ರ ಎರಡು ಡೋಸ್ ಲಸಿಕೆ ನೀಡಲಾಗಿದೆ. ಯಾವ ಸಾಧನೆಗೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ? ಸುಳ್ಳು ಸಾಧನೆಗಳ ಖಾಲಿ ತಟ್ಟೆ ಬಡಿಯುತ್ತಾ ದೇಶದ ಜನರನ್ನು ಮರುಳು ಮಾಡುತ್ತಾ ಬಂದ ನರೇಂದ್ರ ಮೋದಿ ಅವರೇ? ಮೊದಲು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಎರಡು ಡೋಸ್ ಲಸಿಕೆ ನೀಡಲು ಗಂಭೀರವಾಗಿ ಸರ್ಕಾರವನ್ನು ತೊಡಗಿಸಿಕೊಳ್ಳಿ. ಸಾಧನೆಯ ಸಂಭ್ರಮಾಚರಣೆ ಆ ಮೇಲೆ ಮಾಡೋಣ ಎಂದು ಟ್ವೀಟಿಸಿದ್ದಾರೆ.

Leave a Comment

Your email address will not be published. Required fields are marked *