ಮಂಗಳೂರು: ದೇಶಾದ್ಯಂತ ಭಾರೀ ಚರ್ಚೆ ಹುಟ್ಟು ಹಾಕಿದ್ದ ಬೆಳ್ತಂಗಡಿಯ ವಿಠಲ್ ಮಲೆಕುಡಿಯ ಹಾಗೂ ಆತನ ತಂದೆ ನಕ್ಸಲ್ ನಂಟು ಹೊಂದಿದ್ದ ಆರೋಪದ ತೀರ್ಪು 9 ವರ್ಷಗಳ ಬಳಿ ನಿನ್ನೆ ಪ್ರಕಟವಾಗಿದೆ.
ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿ ವಿಠಲ ಮಲೆಕುಡಿಯ ಮಂಗಳೂರು ವಿವಿಯ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದು, 2012ರ ಮಾರ್ಚ್ 03ರಂದು ನಕ್ಸಲ್ ನಿಗ್ರಹ ಪಡೆಯಿಂದ ವಿಠಲ ಮಲೆಕುಡಿಯ ಮತ್ತು ಆತನ ತಂದೆ ಬಂಧನವಾಗಿತ್ತು. ಇದೀಗ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಿಂದ ಅಂತಿಮ ತೀರ್ಪು ಪ್ರಕಟಿಸಿದದ್ದು ಇಬ್ಬರೂ ನಿರಪರಾಧಿಗಳು ಎಂದು ಘೋಷಿಸಿದೆ.
ವಿಠಲ್ ಮನೆಗೆ ದಾಳಿ ನಡೆಸಿದ್ದ ವೇಳೆ ಚುನಾವಣೆ ಬಹಿಷ್ಕಾರದ ಕರಪತ್ರ, ಭಗತ್ ಸಿಂಗ್ ಪುಸ್ತಕ, ನಕ್ಸಲ್ ಬರಹದ ಪತ್ರಿಕಾ ಕಟ್ಟಿಂಗ್ ಗಳು ಪತ್ತೆಯಾಗಿತ್ತು. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಮೂಲ ನಿವಾಸಿಗಳನ್ನ ಒಕ್ಕಲೆಬ್ಬಿಸೋದ್ರ ವಿರುದ್ದ ಹೋರಾಟ ನಡೆಸುತ್ತಿದ್ದ ವಿಠಲ್ ಗೆ ನಕ್ಸಲ್ ನಂಟಿದೆ ಎಂದು ಎಎನ್ ಎಫ್ ಬಂಧಿಸಿ ವೇಣೂರು ಪೊಲೀಸರಿಗೆ ಒಪ್ಪಿಸಿದ್ದ ನಕ್ಸಲ್ ನಿಗ್ರಹ ಪಡೆ.
ವಿಠಲ್ ಬಂಧನವಾದಾಗ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಸೇರಿ ಕಮ್ಯುನಿಸ್ಟ್ ರಾಷ್ಟ್ರೀಯ ನಾಯಕರು ಮಂಗಳೂರು ಜೈಲಿಗೆ ಭೇಟಿ ನೀಡಿದ್ದರು ಇಡೀ ದೇಶದಲ್ಲೇ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣದ ಅಂತಿಮ ತೀರ್ಪು ಪ್ರಕಟವಾಗಿದ್ದು ತಂದೆ ಮಗ ನಿಟ್ಟುಸಿರು ಬಿಟ್ಟಿದ್ದಾರೆ.