ಮೈಸೂರು: ಜುಲೈ 25, 2021ರಂದು ರಾಜ್ಯಾಧ್ಯಂತ ನಡೆಸಲಾಗಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿಯ ಪರೀಕ್ಷೆಯಲ್ಲಿ ಪುರುಷ ಅಭ್ಯರ್ಥಿಗಳೇ ಮೇಲುಗೈ ಸಾಧಿಸಿರುವುದಾಗಿ ತಿಳಿದು ಬಂದಿದೆ.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಕೆಸೆಟ್-2021ರ ಪರೀಕ್ಷೆಯ ಫಲಿತಾಂಶವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಬಿಡುಗಡೆ ಮಾಡಿದರು. ಈ ಬಾರಿ 83,907 ಅಭ್ಯರ್ಥಿಗಳು ಕೆಸೆಟ್ ಪರೀಕ್ಷೆಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಇವರಲ್ಲಿ 69,857 ಅಭ್ಯರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು ಎಂದು ತಿಳಿಸಿದರು.
ಇನ್ನೂ ಪರೀಕ್ಷೆಗೆ ಹಾಜರಾದ 69,857 ಅಭ್ಯರ್ಥಿಗಳ ಪೈಕಿ, 4,779 ಅಭ್ಯರ್ಥಿಗಳು ತೇರ್ಗಡೆಯಾಗಿದ್ದಾರೆ. ಇವರಲ್ಲಿ 2,470 ಪುರುಷ ಅಭ್ಯರ್ಥಿಗಳಾಗಿದ್ದರೆ, 2,309 ಮಹಿಳಾ ಅಭ್ಯರ್ಥಿಗಳು ಆಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು http://kset.uni-mysore.ac.in/ ಜಾಲತಾಣಕ್ಕೆ ಭೇಟಿ ನೀಡಿ, ಅಲ್ಲಿ ಕಾಣುವಂತ ಕೆಸೆಟ್-2021ರ ಫಲಿತಾಂಶದ ಲಿಂಕ್ ಮೇಲೆ , ತಮ್ಮ ನೊಂದಣಿ ಸಂಖ್ಯೆಯನ್ನು ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.