ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಕೂಡ ಪೆಟ್ರೋಲ್, ಡೀಸೆಲ್ ಮೇಲೆ ತಲಾ 7 ರೂಪಾಯಿ ಬೆಲೆ ಕಡಿತಗೊಳಿಸಿದೆ. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಮಾಹಿತಿ ನೀಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರದ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ.
ರಾಜ್ಯ ಸರ್ಕಾರದ ಈ ನಿರ್ಧಾರ ನ.4ರ ಸಾಯಂಕಾಲದಿಂದ ಅನ್ವಯವಾಗುವುದು. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ. ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.