Ad Widget .

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಎತ್ತಂಗಡಿ..?

ಬೆಂಗಳೂರು: ಪಕ್ಷ ಸಂಘಟನೆಯಲ್ಲಿ ವಿಫಲ, ಉಪಚುನಾವಣೆ ಹಿನ್ನಡೆ, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಸೋತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರ ಸ್ಥಾನ ಬದಲಾಗಿದೆ ಎಂಬ ವದಂತಿ ಹಬ್ಬಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇದೇ 9ರಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು, ಅಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಖಜಾಂಚಿ, ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕೋರ್ ಕಮಿಟಿ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ.

Ad Widget . Ad Widget . Ad Widget .

ಇತ್ತೀಚೆಗೆ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಗೆ ಹಾನಗಲ್‍ನಲ್ಲಿ ಹಿನ್ನೆಡೆಯಾಗಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತದೆ. ವಾಸ್ತವವಾಗಿ ನಳೀನ್‍ಕುಮಾರ್ ಕಟೀಲ್ ಅವರನ್ನು ಬದಲಾಯಿಸಿ ತೆರವಾಗಲಿರುವ ಈ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎಂಬುದರ ಬಗ್ಗೆ ಉಸ್ತುವಾರಿಯಾಗಿರುವ ಅರುಣ್ ಸಿಂಗ್ ಪಕ್ಷದ ಪ್ರಮುಖರ ಜೊತೆ ಅಭಿಪ್ರಾಯವನ್ನು ಸಂಗ್ರಹಿಸಲಿದ್ದಾರೆ.

ಸಾಮಾನ್ಯವಾಗಿ ಬಿಜೆಪಿಯಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡುವ ಸಂಪ್ರದಾಯವಿದೆ. ರಾಷ್ಟ್ರ ಮಟ್ಟದಲ್ಲಾಗಲಿ ಅಥವಾ ರಾಜ್ಯ ಮಟ್ಟದಲ್ಲಾಗಲಿ ಒಂದು ಬಾರಿ ಅಧ್ಯಕ್ಷರಾದರೆ ಮೂರು ವರ್ಷ ಅವರ ಸ್ಥಾನ ಅಬಾದಿತ ಎನ್ನಲಾಗುತ್ತಿತ್ತು.
ಎನ್ನಲಾಗುತ್ತಿತ್ತು.

ಆದರೆ ನಳೀನ್‍ಕುಮಾರ್ ಕಟೀಲ್ ಅಧ್ಯಕ್ಷರಾದ ನಂತರ ಸ್ವತಂತ್ರವಾಗಿ ಯಾವುದೇ ಪ್ರಮುಖ ತೀರ್ಮಾನವನ್ನು ತೆಗೆದುಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ ಎಂಬ ಮಾತು ಕೇಸರಿ ಪಾಳೆಯದಲ್ಲಿ ಕೇಳಿಬರುತ್ತಿದೆ. ಪ್ರತಿಯೊಂದನ್ನು ದೆಹಲಿಯಲ್ಲಿರುವ ಕರ್ನಾಟಕವನ್ನು ಪ್ರತಿನಿಸುವ ಪ್ರಭಾವಿ ನಾಯಕರ ಕಣ್ಣಸನ್ನೆಯಂತೆ ಕೆಲಸ ಮಾಡುತ್ತಿದ್ದಾರೆ. ಕೆಳಹಂತದ ಕಾರ್ಯಕರ್ತರನ್ನು ಗುರುತಿಸುವಲ್ಲೂ ಅವರು ವಿಫಲರಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಗೆ ಕೋಕ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Comment

Your email address will not be published. Required fields are marked *