ಭಟ್ಕಳ: ತನ್ನ ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ನಾಪತ್ತೆಯಾದ ಯುವತಿಯನ್ನು ಮಂಕಿಯ ಯತ್ನಳ್ಳಿ, ಆಡುಕಾಲ್ ನಿವಾಸಿ, ತಾರಾ ನಾರಾಯಣ ಮರಾಠಿ (19) ಎಂದು ಗುರುತಿಸಲಾಗಿದೆ.
ಈಕೆ ನವೆಂಬರ್ 5 ರಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದವಳು, ಅಲ್ಲಿಗೂ ಹೋಗದೇ ಈವರೆಗೂ ಮನೆಗೆ ವಾಪಸ್ ಬಾರದೇ, ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿದ್ದಾಳೆ . ಈ ಕುರಿತು ಮಂಕಿಯ ಯತ್ನಳ್ಳಿ, ಆಡುಕಾಲಯ ಗ್ರಾಮದ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.