ದುಬೈ: ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್-2 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿದೆ. ಪಾಕ್ ನೀಡಿದ ರನ್ಗಳ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ ನಿಗದಿತ 19 ಓವರ್ನಲ್ಲಿ 5 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿ ಗೆದ್ದು ಬೀಗಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಪಾಕ್ 4 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತ್ತು. ಈ ಮೂಲಕ ಆಸ್ಟ್ರೇಲಿಯಾಗೆ 177 ರನ್ಗಳ ಟಾರ್ಗೆಟ್ ನೀಡಿತ್ತು. ಪಾಕ್ ಪರ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ 67, ಬಾಬರ್ ಅಜಂ 39, ಫಾಕರ್ ಜಮಾನ್ 55 ರನ್ ಗಳಿಸುವ ಮೂಲಕ ಉತ್ತಮ ಮೊತ್ತ ಪೇರಿಸಿದ್ದರು.
ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 49, ಮೆಚೆಲ್ ಮಾರ್ಷ್ 28, ಸ್ಟಾಯಿನಿಸ್ 40, ಮಾಥೀವ್ ವಾಡೆ 35 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿದರು. ಈ ಮೂಲಕ T20 ವಿಶ್ವಕಪ್ ಫೈನಲ್ಗೆ ಆಸ್ಟ್ರೇಲಿಯಾ ಪ್ರವೇಶಿಸಿದೆ.